/newsfirstlive-kannada/media/post_attachments/wp-content/uploads/2025/06/akash-death.jpg)
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ ಡ್ರೀಮ್ಲೈನರ್ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಒಬ್ಬ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾನೆ. ಆದ್ರೆ ಇಲ್ಲಿಯವರೆಗೂ ವಿಮಾನವನ್ನೇ ಹತ್ತದ ಮುಗ್ಧ ಬಾಲಕ ಏರ್ ಇಂಡಿಯಾ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ನಿಜಕ್ಕೂ ಹೃದಯ ವಿದ್ರಾವಕ ಘಟನೆಯಾಗಿದೆ.
ಇದನ್ನೂ ಓದಿ:ವಿಮಾನ ದುರಂತದ ದಿನ ಈ ನ್ಯೂಸ್ ಪೇಪರ್ನಲ್ಲಿ ಸೇಮ್ ಟು ಸೇಮ್ ಜಾಹೀರಾತು!
ಹೌದು, ಲಂಡನ್ಗೆ ಹೊರಟಿದ್ದ ಬೋಯಿಂಗ್ ಡ್ರೀಮ್ ಲೈನರ್ ವಿಮಾನ ಟೇಕ್ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ದೊಡ್ಡ ದುರಂತವನ್ನೇ ಸೃಷ್ಟಿಸಿತ್ತು. ಈ ಘಟನೆ ನಡೆದು 2 ದಿನಗಳು ಕಳೆದಿವೆ. ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಹಿಂದಿನ ಕಣ್ಣೀರು ತರಿಸೋ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಆಕಾಶದಲ್ಲಿ ಹಾರಾಡೋ ವಿಮಾನವನ್ನು ನೋಡಿ ಖುಷಿ ಪಡುತ್ತಿದ್ದ ಕಡು ಬಡತನದ ಮುಗ್ಧ ಬಾಲಕ ಈ ದುರಂತದಲ್ಲಿ ತನ್ನ ಉಸಿರನ್ನೇ ನಿಲ್ಲಿಸಿದ್ದಾನೆ ಅನ್ನೋದು ಕರಳು ಹಿಂಡುವಂತಿದೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಈ ಬಾಲಕ ಪ್ರಾಣಬಿಟ್ಟಿದ್ದಾನೆ. ಅಷ್ಟಕ್ಕೂ ಈ ಬಾಲಕ ವಿಮಾನದಲ್ಲಿ ಆಗಲಿ, ಹಾಸೆಲ್ಟ್ನಲ್ಲಿ ಆಗಲಿ ಇರಲಿಲ್ಲ. ಬದಲಿಗೆ ಘಟನೆ ನಡೆದ ಸ್ಥಳದಲ್ಲಿ ಟೀ ಸ್ಟಾಲ್ ಬಳಿ ನಿಂತಿದ್ದ ಅಷ್ಟೇ. ಅಲ್ಲಿ ವಿಮಾನ ಪತನಗೊಂಡಿದೆ. ಅದರಲ್ಲಿ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ. ಮೃತ ಬಾಲಕನ ಹೆಸರು ಆಕಾಶ್. ಬಿಜೆ ಹಾಸ್ಟೆಲ್‌ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿ ಸೀತಾಗೆ ಊಟ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ ಟೀ ಅಂಗಡಿಯ ಮುಂದೆ ನಿಂತಿದ್ದ. ಏಕಾಏಕಿ ದೊಡ್ಡ ಮಟ್ಟದಲ್ಲಿ ಬೆಂಕಿ ಸ್ಫೋಟಗೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಆಕಾಶ್‌ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಆದ್ರೆ ಆಕಾಶ್ ಇನ್ನಿಲ್ಲ ಅನ್ನೋ ವಿಷಯ ತಾಯಿಗೆ ಇನ್ನೂ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್‌ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಅಂತ ಅಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ