newsfirstkannada.com

WATCH: ಮೊದಲ ಗ್ಯಾರಂಟಿಗೆ ಕಂಡಕ್ಟರ್ ಆಗ್ತಾರಾ ಸಿಎಂ?; ಫ್ರೀ ಶಕ್ತಿ ಚಾಲನೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

Share :

10-06-2023

    ನಾಳೆ ಸಿಎಂ ಸಿದ್ದರಾಮಯ್ಯ ರೈಟ್.. ರೈಟ್ ಅಂತಾರಾ?

    ರಾಜ್ಯದ ಎಲ್ಲಾ ಮಹಿಳೆಯರಿಗೆ ಫ್ರೀ ಶಕ್ತಿ ಭಾಗ್ಯ ಫಿಕ್ಸ್!

    ಮೊದಲ ಗ್ಯಾರಂಟಿ ಜಾರಿ ಬಗ್ಗೆ ಸಿಎಂ ಕೊಟ್ರು ಕ್ಲಾರಿಟಿ

ಮೈಸೂರು: ರಾಜ್ಯದ ಜನರಿಗೆ 5 ಭರವಸೆಗಳನ್ನು ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಮೊದಲ ಗ್ಯಾರಂಟಿ ಯೋಜನೆ ಜಾರಿಗೆ ಸಜ್ಜಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಸಂಚರಿಸುವ ಶಕ್ತಿ ಯೋಜನೆ ಜಾರಿಗೆ ಬರುತ್ತಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಮೊದಲ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾಳೆ ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆ ಲಾಂಚ್ ಮಾಡ್ತಾ ಇದ್ದೀವಿ. ನಾಳೆಯಿಂದ ವೋಲ್ವೋ, AC ಬಸ್‌ಗಳನ್ನ ಬಿಟ್ಟು ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದಾಗಿದೆ ಎಂದಿದ್ದಾರೆ.

ನಾಳೆ ಬೆಳಗ್ಗೆ ವಿಧಾನಸೌಧದ ಹತ್ರ ನಾನು, ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಗೆ ಚಾಲನೆ ನೀಡ್ತಾ ಇದ್ದೀವಿ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಬಾರಿಗೆ ಈ ಗ್ಯಾರಂಟಿ ಯೋಜನೆಗೆ ಚಾಲನೆ ಸಿಕ್ತಿದೆ. ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ನಾಳೆಯಿಂದ ರಾಜ್ಯದ ಒಳಗೆ ಮಹಿಳೆಯರು ಸಾರಿಗೆ ಬಸ್‌ನಲ್ಲಿ ಸಂಚಾರ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ಕಂಡಕ್ಟರ್ ಆಗಿ ಮಹಿಳೆಯರಿಗೆ ಟಿಕೆಟ್‌ ಕೊಡ್ತೀನಿ ಅಂತಾ ಹೇಳಿದ್ನಾ.. ಮಾಧ್ಯಮಗಳಲ್ಲಿ ಹಾಗೆ ತೋರಿಸಲಾಗಿದೆ ಅಷ್ಟೇ. ನಾನು ಹೇಳಿದ್ದನ್ನಷ್ಟೇ ನೀವು ತೋರಿಸಿ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ  

WATCH: ಮೊದಲ ಗ್ಯಾರಂಟಿಗೆ ಕಂಡಕ್ಟರ್ ಆಗ್ತಾರಾ ಸಿಎಂ?; ಫ್ರೀ ಶಕ್ತಿ ಚಾಲನೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

https://newsfirstlive.com/wp-content/uploads/2023/06/Siddaramaiah-9.jpg

Load More