newsfirstkannada.com

ಅನಂತ್-ರಾಧಿಕಾ ಮದುವೆಗೂ ಮುನ್ನ 50 ಜೋಡಿಗಳ ಸಾಮೂಹಿಕ ವಿವಾಹ; ಏನಿದರ ವಿಶೇಷತೆ?

Share :

Published July 3, 2024 at 6:15am

  ಜುಲೈ 12ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅನಂತ್​ ಅಂಬಾನಿ, ರಾಧಿಕಾ

  ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು ಅನಂತ್​​, ರಾಧಿಕಾ ಮದುವೆ ಆಮಂತ್ರಣ

  ಗುಜರಾತ್​ನ ಜಾಮ್​ನಗರದಲ್ಲಿ ಬಹಳ ಅದ್ಧೂರಿಯಾಗಿ ನೆರವೇರಿತ್ತು ಅನಂತ್​ ಪ್ರೀ ವೆಡ್ಡಿಂಗ್

ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಮುಖೇಶ್​ ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಮದುವೆಗೆ 12 ದಿನಗಳು ಬಾಕಿ ಉಳಿದಿವೆ. ಜುಲೈ 12ರಂದು ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಇನ್ನೂ ಅನಂತ್​ ಹಾಗೂ ರಾಧಿಕಾ ಮದುವೆ ಹತ್ತಿರವಾಗುತ್ತಿದ್ದಂತೆ ಅಂಬಾನಿ ಕುಟುಂಬಸ್ಥರು ಸಾಮೂಹಿಕ ವಿವಾಹವನ್ನು ಹಮ್ಮಿಕೊಂಡಿದ್ದರು. ಹೌದು, ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಟರ್ ಪ್ರದೇಶದಲ್ಲಿನ 50ಕ್ಕೂ ಹೆಚ್ಚು ಜೋಡಿಗಳಿಗೆ ಮದುವೆ ಮಾಡಿಸಿದ್ದಾರೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್ ಕಾರ್ಪೊರೇಟ್ ಪಾರ್ಕ್​ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ನವ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು.

ಅನಂತ್-ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ದೇಶದಾದ್ಯಂತ ನೂರಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳಿಗೆ ಆಯೋಜನೆ ಮಾಡಲು ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ನವ ವಿವಾಹಿತ ಜೋಡಿಗಳಿಗೆ ಶುಭಾಶಯಗಳನ್ನು ಸಲ್ಲಿಸಿದರು.

ಇದನ್ನೂ ಓದಿ: ಐಷಾರಾಮಿ ಹಡಗಿನಲ್ಲಿ ಅನಂತ್​​ ಅಂಬಾನಿಯ ರಾಧಿಕಾ ಮರ್ಚೆಂಟ್ 2ನೇ ಪ್ರೀ ವೆಡ್ಡಿಂಗ್; ಏನೆಲ್ಲಾ ವಿಶೇಷತೆ ಇರಲಿದೆ?

ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರಗಳು, ಮೂಗುತಿ, ತಾಳಿ ಸೇರಿದಂತೆ ಚಿನ್ನಾಭರಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ ರೂ. 1.01 ಲಕ್ಷ ರೂಪಾಯಿಯನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಅಲ್ಲದೆ ಪ್ರತಿ ದಂಪತಿಗೂ ಒಂದು ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು.

ಈ ಗೃಹೋಪಯೋಗಿ ವಸ್ತುಗಳಲ್ಲಿ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟ್‌, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಇದ್ದವು. ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಆಹ್ವಾನಿತರು ವೀಕ್ಷಿಸಿದರು. ಈ ಹಿಂದೆ ಕೂಡ ಅಂಬಾನಿ ಕುಟುಂಬದಲ್ಲಿ ಮದುವೆ ನಡೆದ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಜನರಿಗೆ ಮತ್ತು ಎನ್‌ಜಿಒಗಳ ಸಹಕಾರದೊಂದಿಗೆ ಅನ್ನ ದಾನ ಸೇವೆ ಮಾಡುತ್ತಾ ಬರುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನಂತ್-ರಾಧಿಕಾ ಮದುವೆಗೂ ಮುನ್ನ 50 ಜೋಡಿಗಳ ಸಾಮೂಹಿಕ ವಿವಾಹ; ಏನಿದರ ವಿಶೇಷತೆ?

https://newsfirstlive.com/wp-content/uploads/2024/07/ambani2.jpg

Load More