newsfirstkannada.com

ಹಠಾತ್ ಹೃದಯಾಘಾತ.. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಅಧಿಕಾರಿ ದಾರುಣ ಸಾವು

Share :

Published May 6, 2024 at 3:57pm

  ಚುನಾವಣೆಯ ಕರ್ತವ್ಯ ನಿರ್ವಹಿಸುವಾಗ ವಾಂತಿಯಾಗಿ ಅಸ್ವಸ್ಥ

  ಬೀದರ್‌ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌

  ಬಾಗಲಕೋಟೆಯಲ್ಲೂ ಚುನಾವಣಾ ಸಿಬ್ಬಂದಿ ಹೃದಯಾಘಾತಕ್ಕೆ ಸಾವು

ಬೀದರ್: ಲೋಕಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯದಲ್ಲಿ ಎರಡು ಆಘಾತಕಾರಿ ಘಟನೆ ನಡೆದಿದೆ. ಬಾಗಲಕೋಟೆಯಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯ ಬಳಿಕ ಬೀದರ್‌ನಲ್ಲಿ ಮತ್ತೊಬ್ಬ ಅಧಿಕಾರಿ ಪ್ರಾಣ ಬಿಟ್ಟಿದ್ದಾರೆ.

ಬೀದರ್‌ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ಈ ದಾರುಣ ಘಟನೆ ನಡೆದಿದೆ. ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ಆನಂದ ಅವರಿಗೆ 32 ವರ್ಷ ವಯಸ್ಸು. ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಆನಂದ್‌ ಅವರು ಸಹಾಯಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಎಸ್‌ಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ಬಸ್​ ಏರುವ ಮುನ್ನ ಹೃದಯಾಘಾತ.. ಚುನಾವಣಾ ಸಿಬ್ಬಂದಿ ಕುಸಿದು ಬಿದ್ದು ಸಾವು 

ಕೃಷಿ ಅಧಿಕಾರಿ ಆನಂದ ಅವರು ಬೆಳಗ್ಗೆ 8ರಿಂದ ಮಧ್ಯಾಹ್ನ 3ಗಂಟೆವರೆಗಿನ ಶಿಫ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುವಾಗ ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಚುನಾವಣಾ ಅಧಿಕಾರಿಯನ್ನ ಸಿಪಿಐ ಶ್ರೀನಿವಾಸ್ ಅಲ್ಲಾಪುರೆ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಕೋಡಂಬಲ್ ಚೆಕ್‌ಪೋಸ್ಟ್‌ನಿಂದ ಹುಮನಾಬಾದ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆನಂದ ನಿಧನರಾಗಿದ್ದಾರೆ.

ಉತ್ತರ ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದೆ. ಇದರ ನಡುವೆ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವನ್ನಪ್ಪಿರೋದು ದುರಂತವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಠಾತ್ ಹೃದಯಾಘಾತ.. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಅಧಿಕಾರಿ ದಾರುಣ ಸಾವು

https://newsfirstlive.com/wp-content/uploads/2024/05/Bidar-Election-Officer-Death.jpg

Load More