/newsfirstlive-kannada/media/post_attachments/wp-content/uploads/2024/08/Hospital.jpg)
ರೋಗ ಬಂತು ಅಂತ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ಮೆಡಿಸಿನ್​ ಕೊಡ್ತಾರೆ. ಆದ್ರೆ ಇಲ್ಲಿ ಮೆಡಿಸಿನ್​ ತಯಾರಿಕಾ ಕಂಪನಿಗೆ ಬೆಂಕಿ ಬಿದ್ದು ಹತ್ತಾರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಅದೆಷ್ಟೋ ಮಂದಿ ಆಸ್ಪತ್ರೆಯ ಬೆಡ್‌ನಲ್ಲಿ ಸುಟ್ಟಗಾಯಗಳಿಂದ ನರಳಾಡುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್, ಅಗ್ನಿಶಾಮಕದಳ ದೌಡು
ನೆರೆಯ ಆಂಧ್ರ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟ ಸಂಭವಿಸಿ 18 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರದ ಅನಕಪಲ್ಲಿಯಲ್ಲಿ ನಡೆದಿದೆ.
ಇದನ್ನೂ ಓದಿ: ಕೈ ಪಾಳಯದ ಆಪತ್ಬಾಂಧವ ಅಭಿಷೇಕ್ ಮನು ಸಿಂಘ್ವಿ: ಆದಾಯವೆಷ್ಟು, ವಿವಾದವೆಷ್ಟು?‘
/newsfirstlive-kannada/media/post_attachments/wp-content/uploads/2024/08/Andra-Factory.png)
380 ಉದ್ಯೋಗಿಗಳು ಏನಾದ್ರು?
ಈ ಸ್ಥಾವರದಲ್ಲಿ ಸುಮಾರು 380 ಉದ್ಯೋಗಿಗಳು ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಧ್ಯಾಹ್ನ 2.15ರ ಸುಮಾರಿಗೆ ಊಟದ ಹೊತ್ತಿಗೆ ಈ ಸ್ಫೋಟ ನಡೆದಿದೆ. ಈ ಸಂದರ್ಭದಲ್ಲಿ ಹೆಚ್ಚು ಮಂದಿ ಆವರಣದಲ್ಲಿ ಇರಲಿಲ್ಲ. ಇಲ್ಲದಿದ್ದಲ್ಲಿ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಯಿತ್ತು. ಸ್ಫೋಟದಲ್ಲಿ ಉಂಟಾದ ಹೊಗೆ ಸುತ್ತಮುತ್ತಲ ಗ್ರಾಮಗಳಲ್ಲಿ ಆವರಿಸಿರೋ ದೃಶ್ಯ ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿವೆ.
/newsfirstlive-kannada/media/post_attachments/wp-content/uploads/2024/08/Andhra-pradesh-Blast.jpg)
ಬೆಂಕಿ ನಂದಿಸಲು ಹರಸಾಹಸ
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದೆ. ಸ್ಫೋಟದ ತೀವ್ರಗೆ ಹಲವು ಮೃತದೇಹಗಳು ಸುಟ್ಟು ಕರಕಲಾಗಿದೆ. ಗಾಯಗೊಂಡವನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 6 ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಅಗ್ನಿಶಾಮಕ ದಳ ಸಂಪೂರ್ಣವಾಗಿ ಆರಿಸಿದೆ.
/newsfirstlive-kannada/media/post_attachments/wp-content/uploads/2024/08/Pharmaceuticals-Company-blast.jpg)
ಸಿಎಂ ಸಂತಾಪ
ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈ ದುರ್ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಜೊತೆಗೆ ಸಂತ್ರಸ್ತರಿಗೆ ಅಗತ್ಯ ನೆರವಿಗೆ ಸೂಚಿಸಿದ್ದಾರೆ. ಇಂದು ಚಂದ್ರಬಾಬು ನಾಯ್ದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
/newsfirstlive-kannada/media/post_attachments/wp-content/uploads/2024/08/Factory-blast.jpg)
ರಿಯಾಕ್ಟರ್ ಸ್ಫೋಟಕ್ಕೆ ಕಾರಣ?
ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು, ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು. ಹಾಗೆ ರಿಯಾಕ್ಟರ್ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳನ್ನ ವ್ಯಕ್ತ ಪಡಿಸಿದ್ದಾರೆ. ಒಟ್ನಲ್ಲಿ ಸರಿಯಾದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದಿರೋದು ಈ ದುರ್ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us