/newsfirstlive-kannada/media/post_attachments/wp-content/uploads/2025/02/Anand-Mahindra.jpg)
ಬೆಂಗಳೂರು: ಕರ್ನಾಟಕ ಸರ್ಕಾರ ಆಯೋಜಿಸಿದ್ದ ಹೂಡಿಕೆದಾರರ ಸಮಾವೇಶದಲ್ಲಿ ಖ್ಯಾತ ಉದ್ಯಮಿ ಆನಂದ್​ ಮಹೀಂದ್ರ ಭಾಗವಹಿಸಿದ್ದರು. ಕನ್ನಡದಲ್ಲೇ ಮಾತು ಆರಂಭಿಸಿದ ಇವರು ಕೊಡಗಿನ ಕಾಫಿ ತೋಟದ ಸವಿನೆನಪು ಹಂಚಿಕೊಂಡರು.
ಇನ್ನು, ಭಾಷಣದ ಆರಂಭದಲ್ಲೇ 60 ವರ್ಷಗಳ ಸವಿ ನೆನಪಿಗೆ ಜಾರಿದ ಉದ್ಯಮಿ ಆನಂದ್​ ಮಹೀಂದ್ರಾ ಅವರು, 1960ರ ಆಸುಪಾಸಿನಲ್ಲಿ ತಮ್ಮ ಪೋಷಕರೊಂದಿಗೆ ಕೊಡಗಿನಲ್ಲಿ ಬೆಳೆದ ದಿನಗಳ ಕುರಿತು ಮಾತಾಡಿದರು. ಕರ್ನಾಟಕ ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ ಬರೋಬ್ಬರಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಭರವಸೆಯನ್ನು ನೀಡಿದರು.
ನಾನು ಮೂಲತಃ ಪಂಜಾಬಿ. ಕೊಡಗಿನ ಕಾಫಿ ಪ್ಲಾಂಟೇಶನ್​ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿದ್ದೇನೆ. ಕರ್ನಾಟಕದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡುವ ಉದ್ದೇಶ ಹೊಂದಿದ್ದೇನೆ. ಈ ಮೂಲಕ ಉದ್ಯಮಕ್ಕೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೆಲಸ ಮಾಡಲಿದ್ದೇನೆ ಎಂದರು.
ಮುಂದಿನ 5 ವರ್ಷಗಳಲ್ಲಿ ಇಂಧನ ಮರುಬಳಕೆ, ಪ್ರವಾಸೋದ್ಯಮ, ರಕ್ಷಣೆ, ವಿದ್ಯುಚ್ಚಾಲಿತ ತ್ರಿಚಕ್ರ ವಾಹನ ತಯಾರಿಕೆ, ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡುತ್ತೇನೆ ಎಂದರು.
ಮಹೀಂದ್ರ ಸಮೂಹ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ಸದ್ಯ 5,000 ಕೋಟಿ ರೂ. ಮೊತ್ತದ ಯೋಜನೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನೂ 6,000 ಕೋಟಿ ರೂ. ಹೂಡಿಕೆ ಮಾಡುತ್ತೇನೆ ಎಂದರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us