ಕೊನೆಗೂ ಭಾವಿ ಪತಿ ಫೋಟೋ ರಿವೀಲ್​ ಮಾಡಿದ ನಿರೂಪಕಿ ಚೈತ್ರಾ ವಾಸುದೇವನ್​; ಯಾರದು?

author-image
Veena Gangani
Updated On
ಕೊನೆಗೂ ಭಾವಿ ಪತಿ ಫೋಟೋ ರಿವೀಲ್​ ಮಾಡಿದ ನಿರೂಪಕಿ ಚೈತ್ರಾ ವಾಸುದೇವನ್​; ಯಾರದು?
Advertisment
  • ಚೈತ್ರಾ ವಾಸುದೇವನ್ ಮದುವೆ ಆಗುತ್ತಿರೋ ಹುಡುಗ ಯಾರು?
  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಿಗ್​​ಬಾಸ್ ಮಾಜಿ ಸ್ಪರ್ಧಿ
  • ಈ ಜೋಡಿಯ ಮುಂದಿನ ಜೀವನಕ್ಕೆ ಮನಸ್ಸಾರೆ ಹಾರೈಸಿದ ಫ್ಯಾನ್ಸ್​

ಕನ್ನಡ ಜನಪ್ರಿಯ ನಿರೂಪಕಿ, ಬಿಗ್​​ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ಅಭಿಮಾನಿಗಳಿಗೆ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ. ಇಷ್ಟು ದಿನ ತಮ್ಮ ಕೆಲಸದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದ ಚೈತ್ರಾ ವಾಸುದೇವನ್ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:ಚಿನ್ನಾಭರಣ ಕೊಳ್ಳುವವರಿಗೆ ಶಾಕಿಂಗ್ ನ್ಯೂಸ್.. ಬಜೆಟ್ 2025 ಬೆನ್ನಲ್ಲೇ ಬಂಗಾರದ ಬೆಲೆ ಏರಿಕೆ?

publive-image

ಇದೀಗ ಚೈತ್ರಾ ವಾಸುದೇವನ್ ಅವರು ತಾವು ಮದುವೆಯಾಗುತ್ತಿರೋ ಹುಡುಗನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಹೌದು, ಕಾಮಿಡಿ ಕಿಲಾಡಿಗಳು ನಿರೂಪಕಿ, ಬಿಗ್​ಬಾಸ್​ ಸೀಸನ್ 7ರ ಮಾಜಿ ಸ್ಪರ್ಧಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಇಷ್ಟು ದಿನ ನಿರಂತರವಾಗಿ ತಮ್ಮ ಕೆಲಸದಲ್ಲಿ ಬ್ಯುಸಿ ಆಗಿರೋ ನಿರೂಪಕಿ ಚೈತ್ರಾ ತಮ್ಮ ಜೀವನದಲ್ಲಿ ಮತ್ತೊಮ್ಮೆ ಹೊಸ ಸಂಗಾತಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ಈ ಬಗ್ಗೆ ಮೊನ್ನೆಯಷ್ಟೇ ಖುದ್ದು ಚೈತ್ರಾ ವಾಸುದೇವನ್ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು.

publive-image

ಇದೀಗ ಭಾವಿ ಪತಿಯ ಜೊತೆಗೆ ನಿಂತುಕೊಂಡು ಫೋಟೋಗೆ ಪೋಸ್​ ಕೊಟ್ಟಿದ್ದಾರೆ ಚೈತ್ರಾ ವಾಸುದೇವನ್. ಶೇರ್ ಮಾಡಿಕೊಂಡ ಫೋಟೋದಲ್ಲಿ ಚೈತ್ರಾ ವಾಸುದೇವನ್ ಗುಲಾಬಿ ಬಣ್ಣದ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚೈತ್ರಾ ವಾಸುದೇವನ್ ಭಾವಿ ಪತಿ ಕೂಡ ತಿಳಿ ಗುಲಾಬಿ ಬಣ್ಣದ ಜುಬ್ಬಾ ಪೈಜಾಮ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಚೈತ್ರಾ ವಾಸುದೇವನ್ ಅವರು, ಪ್ರೀತಿ ತುಂಬಿದ ಜೀವನಕ್ಕೆ ಕಾಲಿಡುತ್ತಿದ್ದೇನೆ ಅಂತ ಬರೆದುಕೊಂಡಿದ್ದಾರೆ. ಇನ್ನೂ, ಜಗದೀಪ್ ಎಲ್ ಎಂಬುವರ ಜೊತೆ ಚೈತ್ರಾ ಮದುವೆಗೆ ಸಜ್ಜಾಗಿದ್ದಾರೆ. ಇದೇ ಮಾರ್ಚ್‌ನಲ್ಲಿ ನಟಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

publive-image

7 ವರ್ಷದ ದಾಂಪತ್ಯ ಬದುಕಿಗೆ ಅಂತ್ಯ ಹೇಳಿದ್ದ​ ಚೈತ್ರಾ ವಾಸುದೇವನ್

ಹೌದು, ಈ ಹಿಂದೆ ಚೈತ್ರಾ ವಾಸುದೇವನ್ ವಿಚ್ಛೇದನ ಬಗ್ಗೆ ಘೋಷಿಸಿದ್ದರು. 7 ವರ್ಷದ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದರು. ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಹಾಕುವ ಮೂಲಕ ವಿಚ್ಛೇದನ ಬಗ್ಗೆ ಹೇಳಿಕೊಂಡಿದ್ದರು.

2017ರಲ್ಲಿ ಮದುವೆಯಾಗಿದ್ದ ಚೈತ್ರಾ ವಾಸುದೇವನ್​

ನಿರೂಪಕಿ ಚೈತ್ರಾ ಅವರು 2017ರಲ್ಲಿ ಸತ್ಯ ನಾಯ್ಡು ಅವರನ್ನು ವಿವಾಹವಾಗಿದ್ದರು. ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ಕಾರ್ಯಕ್ರಮಗಳಲ್ಲಿ ನಿರೂಪಕಿ ಆಗಿ ಕಾಣಿಸಿಕೊಳ್ಳುತ್ತಿದ್ದರು. ಕಿಚ್ಚ ಸುದೀಪ್​ ನಿರೂಪಣೆಯ ಬಿಗ್ ಬಾಸ್ 7ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಚೈತ್ರಾ ಅವರು ಡಿವೋರ್ಸ್​ಗೆ ಕಾರಣ ಏನು ಅಂತ ಬಹಿರಂಗ ಪಡಿಸಿದ್ದರು.

publive-image

ಸದ್ಯ ಚೈತ್ರಾ ವಾಸುದೇವನ್ ಅವರು ಯಾರನ್ನು ಮದುವೆ ಆಗುತ್ತಿದ್ದಾರೆ, ಆ ಹುಡುಗ ಯಾರು, ಕೆಲಸ ಏನು ಎಂಬುದರ ಬಗ್ಗೆ  ರಿವೀಲ್ ಮಾಡಿಲ್ಲ. ಅಲ್ಲದೇ ಇದೇ ವರ್ಷ ಮಾರ್ಚ್​ನಲ್ಲಿ ಮದುವೆ ಆಗಲಿದ್ದೇವೆ ಅಂತ ದಿನಾಂಕದ ಬಗ್ಗೆ ಮಾಹಿತಿ ನೀಡಿಲ್ಲ. ಇನ್ನೂ ನಟಿ ಶೇರ ಮಾಡಿಕೊಂಡ ವಿಡಿಯೋ ನೋಡಿದ ನೆಟ್ಟಿಗರು ಹೊಸ ಜೋಡಿಗೆ ಶುಭಕೋರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment