ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಹೆಮ್ಮೆಯ ಗರಿ; ನ್ಯಾಷನಲ್‌ Rankingನಲ್ಲಿ ಎಷ್ಟನೇ ಸ್ಥಾನ?

author-image
admin
Updated On
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಹೆಮ್ಮೆಯ ಗರಿ; ನ್ಯಾಷನಲ್‌ Rankingನಲ್ಲಿ ಎಷ್ಟನೇ ಸ್ಥಾನ?
Advertisment
  • ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಹಿರಿಮೆಗೆ ಮತ್ತೊಂದು ಗರಿ
  • ರಾಜ್ಯ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ 24ನೇ ಸ್ಥಾನ ಪಡೆದ ಬೆಂವಿವಿ
  • ಬೆಂಗಳೂರಿನ ಐಐಎಸ್​ಸಿ ಱಂಕಿಂಗ್​ ಪಟ್ಟಿಯಲ್ಲಿ ಎರಡನೇ ಸ್ಥಾನ

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ. ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು National Institute Ranking Framework (NIRF) ಶ್ರೇಯಾಂಕದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ 81 ಸ್ಥಾನಕ್ಕೆ ಭಾಜನವಾಗಿದೆ. ರಾಜ್ಯ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ 24ನೇ ಸ್ಥಾನ ಪಡೆದಿದೆ. ಈ ಮೂಲಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂವಿವಿ ತನ್ನ ಸಾಧನೆಯನ್ನು ಮುಂದುವರೆಸಿದೆ.

ವಿದ್ಯಾರ್ಥಿ ಸ್ನೇಹಿ ವಾತವರಣ, ಅನುಭವಿ ಶಿಕ್ಷಕ ವರ್ಗ, ಅತ್ಯುತ್ತಮ ಪಠ್ಯಧಾರಿತ ಶಿಕ್ಷಣ, ತಂತ್ರಜ್ಞಾನಕ್ಕೆ ಆದ್ಯತೆ, ಕ್ರಿಯಾಶೀಲತೆ, ನಾವೀನ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಾತಾವರಣ ಒದಗಿಸಿರುವ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಈ ಶ್ರೇಯಾಂಕ ದಕ್ಕಿರುವುದು ವಿವಿ ಬದ್ದತೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಸತತ 6ನೇ ಬಾರಿಯೂ ಮದ್ರಾಸ್ IITಗೆ ಅಗ್ರಸ್ಥಾನ.. ಟಾಪ್ 10ರಲ್ಲಿ ಬೆಂಗಳೂರು IIScಗೆ ಎಷ್ಟನೇ ಸ್ಥಾನ?

ವಿಶ್ವದಲ್ಲೇ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅತ್ಯುತ್ತಮ ವಿವಿ ಎಂದು ಗುರುತಿಸಿಕೊಂಡಿದೆ. ಇತ್ತೀಚಿಗಷ್ಟೇ NAAC A++ ಮತ್ತು ಪಿಎಂ - ಉಷಾ ಯೋಜನೆಯಡಿ 100 ಕೋಟಿ ಅನುದಾನವನ್ನು ಪಡೆದುಕೊಂಡಿತ್ತು. ಮುಂದುವರೆದ ಭಾಗವಾಗಿ NIRF ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಬೆಂಗಳೂರು ವಿವಿ ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಮುಂದುವರೆಸಿದೆ.

ಇದನ್ನೂ ಓದಿ:ಸ್ಕಾಲರ್​ಶಿಪ್​ಗಾಗಿ ಇನ್ಫೋಸಿಸ್ ಅರ್ಜಿ ಆಹ್ವಾನ.. ಆಯ್ಕೆಯಾದವರಿಗೆ ಎಷ್ಟು ಲಕ್ಷ? ಅರ್ಹತೆಗಳು ಏನು?

ಈ ಸಂದರ್ಭದಲ್ಲಿ ಕುಲಪತಿಗಳು ಕರ್ನಲ್ ಡಾ.ಜಯಕರ ಎಸ್ ಎಂ ಪ್ರತಿಕ್ರಿಯಿಸಿದ್ದು NIRF ಶ್ರೇಯಾಂಕದಲ್ಲಿ ಸ್ಥಾನ‌ ಪಡೆದಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯ. ಶಿಕ್ಷಣ, ಸಂಶೋಧನೆ, ತಂತ್ರಜ್ಞಾನ, ಮೂಲಭೂತ ಸೌಕರ್ಯ ಮತ್ತು ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಬಲ ಬಂದಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಮತ್ತಷ್ಟು ಶ್ರಮಿಸಲಿದೆ. ಈ ಸಾಧನೆಗೆ ಕಾರಣಕರ್ತರಾದ ಸರ್ವರಿಗೂ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಐಐಎಸ್​ಸಿ ಱಂಕಿಂಗ್​ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವ ಮೂಲಕ, ತನ್ನ ಸ್ಥಾನವನ್ನು ಬಿಟ್ಟುಕೊಟ್ಟಿಲ್ಲ. ಬಾಂಬೆ ಐಐಟಿ ಮೂರನೇ ಸ್ಥಾನದಲ್ಲಿದೆ.

ಟಾಪ್​ 10 ಪಟ್ಟಿಯಲ್ಲಿರುವ ಸಂಸ್ಥೆಗಳು

1) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ಮದ್ರಾಸ್ (ಚೆನ್ನೈ)
2 ) ಭಾರತೀಯ ವಿಜ್ಞಾನ ಸಂಸ್ಥೆ (IISc) ಬೆಂಗಳೂರು
3) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ಬಾಂಬೆ (ಮುಂಬೈ)
4) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ದೆಹಲಿ (ನವದೆಹಲಿ)
5) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ಕಾನ್ಪುರ್ (ಉತ್ತರಪ್ರದೇಶ
6) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT)ಖರಗ್​ಪುರ್ (ಪ.ಬಂಗಾಳ)
7) ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(AIMS) (ದೆಹಲಿ)
8 )ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ಗುಹವಾಟಿ (ಅಸ್ಸಾಂ)
9) ಭಾರತೀಯ ತಂತ್ರಜ್ಞಾನ ಸಂಸ್ಥೆ(IIT) ರೂಕ್ರೀ (ಉತ್ತರಾಖಂಡ್)
10)ಜವಹಾರಲಾಲ್ ನೆಹರು ವಿವಿ (JNU) ದೆಹಲಿ (ನವದೆಹಲಿ)

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment