newsfirstkannada.com

ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯ ಹೇಗಿದೆ?; ಅಪೋಲೊ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

Share :

30-08-2023

    ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಹೆಚ್‌ಡಿಕೆ

    ತಡರಾತ್ರಿ 3.40ಕ್ಕೆ ಅಪೋಲೊ ಆಸ್ಪತ್ರೆ ಬಂದ ಕುಮಾರಸ್ವಾಮಿ

    ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪತ್ನಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದ್ದು, ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.

ಇಂದು ಬೆಳಗ್ಗಿನ ಜಾವ ಮೂರು ಗಂಟೆಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ಅನಿತಾ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಪತಿಯ ಆರೋಗ್ಯ ವಿಚಾರಿಸಿ ತೆರಳಿದ್ದಾರೆ.

ಹೆಲ್ತ್ ಬುಲೆಟಿನ್‌ ಪ್ರಕಾರ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಸುಸ್ತಾದ ಹಿನ್ನೆಲೆ ತಡರಾತ್ರಿ 3.40ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸದ್ಯ ಚೇತರಿಕೆ ಕಂಡಿದೆ ಎಂದು ಅಪೋಲೊ ಆಸ್ಪತ್ರೆ ವೈದ್ಯರು ತಮ್ಮ ಹೆಲ್ತ್ ಬುಲೆಟಿನ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ಡಾ. ಪಿ. ಸತೀಶ್ ಚಂದ್ರ ಮತ್ತವರ ತಂಡ ಕುಮಾರಸ್ವಾಮಿ ಅವರಿಗೆ ಟ್ರೀಟ್ಮೆಂಟ್ ಮುಂದುವರೆಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯ ಹೇಗಿದೆ?; ಅಪೋಲೊ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

https://newsfirstlive.com/wp-content/uploads/2023/08/HD-Kumaraswamy-Apollo-Hospital.jpg

Load More