newsfirstkannada.com

ಕೇಜ್ರಿವಾಲ್‌ಗೆ ಬಿಗ್‌ ಶಾಕ್‌ ಕೊಟ್ಟ MP ಸ್ವಾತಿ ಮಲಿವಾಲ್; ದೆಹಲಿ ಸಿಎಂ ಮನೆಯಲ್ಲಿ ನಡೆದಿದ್ದೇನು?

Share :

Published May 13, 2024 at 5:25pm

  ಇಂದು ಬೆಳಗ್ಗೆ ದೆಹಲಿ ಸಿಎಂ ನಿವಾಸಕ್ಕೆ ತೆರಳಿದ್ದ ಸ್ವಾತಿ ಮಲಿವಾಲ್!

  ಎರಡು ದಿನದ ಹಿಂದಷ್ಟೇ ತಿಹಾರ್‌ ಜೈಲಿನಿಂದ ಬಂದಿರುವ ಕೇಜ್ರಿವಾಲ್

  ದೆಹಲಿ ಸಿಎಂ ನಿವಾಸದಿಂದಲೇ ಪೊಲೀಸ್ ಕಂಟ್ರೋಲ್ ರೂಮುಗೆ ಕರೆ

ನವದೆಹಲಿ: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ತನ್ನದೇ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸಿಎಂ ಕೇಜ್ರಿವಾಲ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಸಿಎಂ ಮನೆಯಲ್ಲೇ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದು, ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ.

ಕಳೆದ ಎರಡು ದಿನದ ಹಿಂದಷ್ಟೇ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್‌ ಜೈಲಿನಿಂದ ಹೊರ ಬಂದು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಇಂದು ಬೆಳಗ್ಗೆ ಆಪ್ ನಾಯಕಿ ಸ್ವಾತಿ ಮಲಿವಾಲ್ ಅವರು ದೆಹಲಿ ಸಿಎಂ ನಿವಾಸಕ್ಕೆ ತೆರಳಿದ್ದಾರೆ. ಈ ವೇಳೆ ಸ್ವಾತಿ ಮಲಿವಾಲ್ ಅವರ ಮೇಲೆ ಕೇಜ್ರಿವಾಲ್ ಅವರ ಆಪ್ತ ವಿಭವ್‌ ಕುಮಾರ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: VIDEO: ಸರತಿ ಸಾಲಿನಲ್ಲಿ ನಿಲ್ಲದೇ ಮತದಾನಕ್ಕೆ ಬಂದ MLA.. ಆಂಧ್ರದಲ್ಲಿ ಕಪಾಳಕ್ಕೆ ಬಾರಿಸಿದ ಮತದಾರ 

ಇದು ಬೆಳಗ್ಗೆ 9.10ಕ್ಕೆ ದೆಹಲಿ ಸಿಎಂ ನಿವಾಸಕ್ಕೆ ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ತೆರಳಿದ್ದಾರೆ. ಸರಿಯಾಗಿ 9.34ಕ್ಕೆ ಸ್ವಾತಿ ಮಲಿವಾಲ್ ಅವರು ಪೊಲೀಸ್ ಕಂಟ್ರೋಲ್ ರೂಮುಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಿಎಂ ಕಚೇರಿಯ PS ಆಪ್ತ ಸಹಾಯಕ ವಿಭವ್ ಕುಮಾರ್‌ರಿಂದ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಸ್ವಾತಿ ಮಲಿವಾಲ್ ಅವರು ದೆಹಲಿ ಸಿಎಂ ಮನೆಯಿಂದ ಪೊಲೀಸ್ ಕಂಟ್ರೋಲ್ ರೂಮ್‌ಗೆ 2 ಬಾರಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ವಾತಿ ಮಲಿವಾಲ್ ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸಿಎಂ ಕಚೇರಿಯಲ್ಲಾದ ಹಲ್ಲೆ ಆರೋಪಕ್ಕೆ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಸ್ವಾತಿ ಮಲೀವಾಲ್ ಅವರು ಇತ್ತೀಚೆಗೆ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮಣಿಪುರದಲ್ಲಿ ನಡೆದ ದೌರ್ಜನ್ಯದ ವಿರುದ್ಧ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಟೀಕೆ ಮಾಡಿ ಸುದ್ದಿಯಾಗಿದ್ದರು. ಇದೀಗ ದೆಹಲಿಯಲ್ಲಿ ಯಾವೊಬ್ಬ ಮಹಿಳೆಯೂ ಸುರಕ್ಷಿತವಲ್ಲ ಎನ್ನುತ್ತಾ ಆಪ್ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇಜ್ರಿವಾಲ್‌ಗೆ ಬಿಗ್‌ ಶಾಕ್‌ ಕೊಟ್ಟ MP ಸ್ವಾತಿ ಮಲಿವಾಲ್; ದೆಹಲಿ ಸಿಎಂ ಮನೆಯಲ್ಲಿ ನಡೆದಿದ್ದೇನು?

https://newsfirstlive.com/wp-content/uploads/2024/05/SwatiMaliwal-Kejriwal.jpg

Load More