Advertisment

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ

author-image
Harshith AS
Updated On
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ
Advertisment
  • ಇಂದೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ
  • ಅರ್ಜಿ ಸಲ್ಲಿಸುವ ಈ ದಾಖಲೆಗಳನ್ನು ಇಟ್ಟುಕೊಳ್ಳಿ
  • ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿ

ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ ಎಂದು ಹೇಳಿದೆ. ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

Advertisment

ವೆಬ್​ಸೈಟ್ ಲಿಂಕ್ ಇಲ್ಲಿದೆ

ಸೇವಾ ಸಿಂಧು ಪೋರ್ಟಲ್ ನಲ್ಲಿ ಕೆಲ ಬದಲಾವಣೆಯಿಂದ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಆದರೀಗ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅದಕ್ಕಾಗಿ https://sevasindhugss.karnataka.gov.in ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.‘

ಸಹಾಯವಾಣಿ

ಗೃಹಜ್ಯೋತಿಗೆ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.

ಗೃಹಜ್ಯೋತಿ ಯೋಜನೆ ನೋಂದಣಿ

ಸಿಎಂ ಸಿದ್ದರಾಮಯ್ಯನವರು ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ‌ ಎಂದು ಹೇಳಿದ್ದರು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾ ಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿಗೆ ಇಂದಿನಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

Advertisment

ಆಧಾರ್ ಸಂಖ್ಯೆ ಬಹುಮುಖ್ಯ

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್, ನಾಡಕಛೇರಿ ಅಥವಾ ಎಲ್ಲಾ ವಿದ್ಯುತ್ ಕಛೇರಿಗಳಲ್ಲಿ ನೋಂದಾಯಿಸಬಹುದಾಗಿದೆ. ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ ಮುಖ್ಯವಾಗಿದೆ. ವಿದ್ಯುತ್ ಬಿಲ್ ನಲ್ಲಿ ನೀಡಲಾದ ವಿದ್ಯುತ್ ಖಾತೆ ಸಂಖ್ಯೆ, ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment