newsfirstkannada.com

ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ.. ಏನಂದ್ರು ಕಾಂಗ್ರೆಸ್​ ನಾಯಕಿ..?

Share :

Published June 2, 2024 at 6:12am

  ಕಮಿಷನಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆ

  ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ

  ಕಮಿಷನಡ್ ಆಫೀಸರ್ ಆಗಿದ್ದಕ್ಕೆ ಭವ್ಯ ನರಸಿಂಹಮೂರ್ತಿ ಹೇಳಿದ್ದೇನು?

ಪ್ರಾದೇಶಿಕ ಸೇನೆಯಲ್ಲಿ ಕಮಿಷಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿದ ಮೊಟ್ಟ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಗಿದ್ದಾರೆ. ಭವ್ಯ ನರಸಿಂಹಮೂರ್ತಿ ಅವರು 2022ರ ಪರೀಕ್ಷೆಯಲ್ಲಿ ಆಯ್ಕೆಗೊಂಡ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಗಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

ಈ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು, ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಈಗ ನಾನು Territorial army (ಪ್ರಾದೇಶಿಕ ಸೇನೆಯಲ್ಲಿ) ಕಮಿಷನಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆಗೊಂಡಿದ್ದೇನೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ನಾನು. ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಆಗಿದ್ದೇನೆ.

Territorial Army ಯಲ್ಲಿ ಎಂ.ಎಸ್ ಧೋನಿ

ಕಾಶ್ಮೀರದಲ್ಲಿ ಭಾರತ- ಪಾಕಿಸ್ತಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ (Lieutenant) ಆಗಿ ನಿಯೋಜನೆಗೊಂಡಿದ್ದೇನೆ. ಪ್ರಾದೇಶಿಕ ಸೇನೆಯು ಭಾರತೀಯ ನಾಗರಕರಿಗೆ ತಮ್ಮ ನಾಗರಿಕ ವೃತ್ತಿಯ ಜೊತೆಗೆ ಭಾರತೀಯ ಸೇನೆಯ ಭಾಗವಾಗಿ ದೇಶಸೇವೆ ಮಾಡುವ ಅವಕಾಶವಾಗಿದೆ. ಪ್ರಸ್ತುತ Territorial Army ಯಲ್ಲಿರುವ ಕೆಲವು ಪ್ರಮುಖ ವ್ಯಕ್ತಿಗಳಲ್ಲಿ ಕ್ರಿಕೆಟ್ ಆಟಗಾರರಾದ ಎಂ.ಎಸ್ ಧೋನಿ, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲೆಟ್, ಮಾಜಿ ಕೇಂದ್ರ ಸಚಿವರಾದ ಅನುರಾಗ್ ಠಾಕೂರ್ ಸೇರಿ ಇತರರು ಇದರಲ್ಲಿದ್ದಾರೆ.

ಇದನ್ನೂ ಓದಿ: Exit Poll: ಮೋದಿಗೆ ಹ್ಯಾಟ್ರಿಕ್ ಗೆಲುವು.. ರಾಹುಲ್‌ ಗಾಂಧಿಗೆ ಎಷ್ಟು ಸೀಟ್ ಗ್ಯಾರಂಟಿ?

ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಸಲ್ಲಿಸುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ದೇಶ ಕರೆದಾಗ ಗಡಿಯಲ್ಲಿ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ. ನಿಮ್ಮೆಲ್ಲರ ಪ್ರೀತಿ ಅಭಿಮಾನ ಹಾಗೂ ಆಶೀರ್ವಾದ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಕೇಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸೇನಾ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ.. ಏನಂದ್ರು ಕಾಂಗ್ರೆಸ್​ ನಾಯಕಿ..?

https://newsfirstlive.com/wp-content/uploads/2024/06/BHAVYA_NARASIMHA.jpg

Load More