/newsfirstlive-kannada/media/post_attachments/wp-content/uploads/2024/12/SOLDIERS.jpg)
ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿದೆ. ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯೋ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಇನ್ನು ಅನೇಕರಿಗೆ ಗಾಯಗಳಾಗಿವೆ. ಈ ಕುರಿತಂತೆ ಕಂಪ್ಲೀಟ್ ಡೀಲೇಟ್ಸ್ ಇಲ್ಲಿದೆ.
300 ಅಡಿಗಳ ಎತ್ತರದಿಂದ ಕಂದಕಕ್ಕೆ ಬಿದ್ದ ಸೇನಾ ವಾಹನ!
ಜಮ್ಮು ಮತ್ತು ಕಾಶ್ಮೀರ.. ನೋಡೋದಕ್ಕೆ ಎಷ್ಟು ಸುಂದರವಾಗಿದ್ಯೋ.. ಇಲ್ಲಿನ ರಸ್ತೆಗಳು ಅಷ್ಟೇ ಅಪಾಯಕಾರಿ.. ಇನ್ನೂ ಇದೇ ರಸ್ತೆ ನಿನ್ನೆ ದೇಶ ಕಾಯೋ ಯೋಧರ ಪ್ರಾಣವನ್ನ ಬಲಿ ಪಡೆದಿದೆ.. ನಿನ್ನೆ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದೆ.
ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನವೊಂದು ದಾರಿ ತಪ್ಪಿ ಕಂದಕಕ್ಕೆ ಬಿದ್ದಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸೇನಾಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲು.. ICUನಲ್ಲಿರುವ ಮಾಜಿ ಕ್ರಿಕೆಟರ್ ಬಗ್ಗೆ ವೈದ್ಯರು ಹೇಳಿದ್ದು ಏನು?
ಈ ದುರಂತದಲ್ಲಿ ಕರ್ನಾಟಕ ಮೂವರು ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ದಯಾನಂದ್, ಉಡುಪಿ ಜಿಲ್ಲೆಯ ಅನೂಪ್, ಬಾಗಲಕೋಟೆಯ ಮಹೇಶ್ ಹುತಾತ್ಮರಾಗಿದ್ದಾರೆ. ಈ ಅಪಘಾತಕ್ಕೆ ಕಾರಣ ಏನು ಎಂಬುದು ಇದುವರೆಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಆದರೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದರ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆದಿರುವ ಸಾಧ್ಯತೆ ಇದ್ಯಾ ಎಂಬ ಬಗ್ಗೆ ತನಿಖೆಯಲ್ಲಿ ತಿಳಿಯಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ