ಚಿತ್ರಕಲಾವಿದ, ಜಾನಪದ ಜಂಗಮ, ಲೇಖಕ ಪಿ.ಆರ್. ತಿಪ್ಪೇಸ್ವಾಮಿ
ಮೈಸೂರು ವಿಶ್ವವಿದ್ಯಾಲಯದಲ್ಲಿ ತಿಪ್ಪೇಸ್ವಾಮಿ ಅಧ್ಯಯನ ಪೀಠ ಅನುಷ್ಠಾನ
ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್‌ಟಿ ಕಲಾ ಪ್ರಶಸ್ತಿ’ ನೀಡಿ ಪುರಸ್ಕಾರ
ಮೈಸೂರು: ಕಲಾವಿದ ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವದ ಅಂಗವಾಗಿ ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್‌ಟಿ ಕಲಾ ಪ್ರಶಸ್ತಿ’ ನೀಡಿ ಪುರಸ್ಕರಿಸಲಾಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವದಲ್ಲಿ ಕಲಾವಿದರನ್ನು ಗೌರವಿಸಿದ ಬಳಿಕ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಸಲ್ಲಿಸಲಾದ ಮನವಿ ಸ್ವೀಕರಿಸಿದ ಅವರು ಭರವಸೆ ನೀಡಿದರು. ಪಿ.ಆರ್. ತಿಪ್ಪೇಸ್ವಾಮಿ ಅಧ್ಯಯನ ಪೀಠ ಪುನಶ್ಚೇತನ ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿತ್ರಕಲಾವಿದ, ಜಾನಪದ ಜಂಗಮ, ಲೇಖಕ ಪಿ.ಆರ್. ತಿಪ್ಪೇಸ್ವಾಮಿ ಅವರು ಈ ನಾಡು ಕಂಡ ಅಪರೂಪದ ವ್ಯಕ್ತಿ. ಹತ್ತು ಹಲವು ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರ. ಅವರ ಹೆಸರನ್ನು ಮುಂದಿನ ಪೀಳಿಗೆಗೆ ಉಳಿಸುವ ಸಲುವಾಗಿ, ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ವಿಶ್ವವಿದ್ಯಾಲಯದಲ್ಲಿ ತಿಪ್ಪೇಸ್ವಾಮಿ ಅಧ್ಯಯನ ಪೀಠ ಅನುಷ್ಠಾನಗೊಳಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ದಯವಿಟ್ಟು ಅದನ್ನು ಪುನಶ್ಚತನಗೊಳಿಸಲು ಕುಲಪತಿಗೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾಲಯದ ಜಾನಪದ ವಸ್ತು ಸಂಗ್ರಹಾಲಯ ಪಿ.ಆರ್. ತಿಪ್ಪೇಸ್ವಾಮಿ ಅವರ ಶ್ರಮದ ಫಲ. ದಯವಿಟ್ಟು ವಸ್ತು ಸಂಗ್ರಹಾಲಯಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಲು ಕ್ರಮ ಕೈಗೊಳ್ಳಬೇಕು, ಬೆಂಗಳೂರಿನ ಚಿತ್ರಕಲಾ ಪರಿಷತ್ ಸಮೀಪದ ರಸ್ತೆ ಅಥವಾ ವೃತ್ತಕ್ಕೆ ಪಿ.ಆರ್. ತಿಪ್ಪೇಸ್ವಾಮಿ ಅವರ ಹೆಸರಿಡಲು ಬಿಬಿಎಂಪಿಗೆ ಸೂಚಿಸಬೇಕೆಂದು ಕೋರುತ್ತೇವೆ.
ಪಿ.ಆರ್. ತಿಪ್ಪೇಸ್ವಾಮಿ ಅವರ ಕಲಾಕೃತಿಗಳನ್ನು ಡಿಜಿಟಲೀಕರಣ ಮಾಡಿಸಲು ಸರ್ಕಾರದಿಂದ ಹೆಚ್ಚಿನ ಧನ ಸಹಾಯ ನೀಡಬೇಕು, ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ನಿವೇಶನವೊಂದನ್ನು ಮಂಜೂರು ಮಾಡಬೇಕು, ಕಲಾವಿದರ ಮಾಸಾಶನದ ಜೊತೆಗೆ ಆರೋಗ್ಯ ವಿಮೆ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ