newsfirstkannada.com

ಅರವಿಂದ್ ಕೇಜ್ರಿವಾಲ್ ಬಂಧಿಸಿದ್ದು ಯಾಕೆ..? ಏನಿದು 100 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಸ್?

Share :

Published March 22, 2024 at 6:57am

  ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್​ರನ್ನ ಬಂಧಿಸಿದ ಇಡಿ

  ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಡಿ ಅರೆಸ್ಟ್

  ಅರವಿಂದ್ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ನಿನ್ನೆ ಏನೆಲ್ಲಾ ಆಯ್ತು..? ​

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ಆಗಿದ್ದಾರೆ. 9 ಬಾರಿ ಇಡಿ ಸಮನ್ಸ್ ಕೊಟ್ಟಿದ್ದರೂ ವಿಚಾರಣೆಗೆ ಗೈರಾಗಿದ್ದ ಕೇಜ್ರಿವಾಲ್, ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್, ಕೇಜ್ರಿವಾಲ್ ಮನವಿ ತಿರಸ್ಕರಿಸಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ವೇಳೆಗೆ ದೆಹಲಿ ಸಿಎಂ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಳಿಕ ಅರವಿಂದ್ ಕೇಜ್ರಿವಾಲ್ ಅವರನ್ನು ಅರೆಸ್ಟ್ ಮಾಡಿ, ಕರೆದೊಯ್ದರು. ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಅರೆಸ್ಟ್ ಮಾಡಿದಂತಾಗಿದೆ. ಕೇಜ್ರಿವಾಲ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾಗಿ ಮೊದಲ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿಯಾಗಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್​ರನ್ನ ಬಂಧಿಸಲಾಗಿದೆ. ಈ ಎಲ್ಲಾ ಪರಿಸ್ಥಿತಿಯನ್ನ ಸೂಕ್ಷ್ಮತೆಯನ್ನು ಅರಿತ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ತಡ ಮಾಡದೇ ಅರೇ ಸೇನಾ ಪಡೆಗಳ ತುಕಡಿಗಳನ್ನು ಸ್ಥಳಕ್ಕೆ ಕರೆಸಿ, ಸಿಎಂ ನಿವಾಸದ ಸುತ್ತ 144 ಸೆಕ್ಷನ್ ಜಾರಿಗೊಳಿಸಿ ಭಾರೀ ಬಿಗಿಭದ್ರತೆಯೊಂದಿಗೆ ಕೇಜ್ರಿವಾಲ್​ರನ್ನ ದೆಹಲಿ ಇಡಿ ಕಚೇರಿಗೆ ಕರೆತಂದಿದ್ದಾರೆ.

12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಬತ್ತು ಬಾರಿ ಇ.ಡಿ ಸಮನ್ಸ್‌ ಬಂದ ಹಿನ್ನೆಲೆ ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಿಸಿತ್ತು. ಕೇಜ್ರಿವಾಲ್ ಪ್ರಕರಣ ಸಂಬಂಧ ಆಮ್​ ಆದ್ಮಿ ಪಾರ್ಟಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಪ್ರಕರಣ ಬಗ್ಗೆ ಇಡಿ ಹೇಳಿದ್ದೇನು?
ದೆಹಲಿ ಅಬಕಾರಿ ನೀತಿ ಹಗರಣದ ಬಗ್ಗೆ ಸಾಮಾನ್ಯ ಅರ್ಥದಲ್ಲಿ ಹೇಳಬೇಕು ಎಂದರೆ ಇದು ಅಬಕಾರಿ ವ್ಯವಹಾರದಲ್ಲಿ ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದ ನೀತಿ ಎನ್ನುವುದು ಆರೋಪ. ಖಾಸಗಿ ಸಂಸ್ಥೆಗಳು ರೀಟೇಲ್ ಲಿಕ್ಕರ್ ವಲಯಕ್ಕೆ ಪ್ರವೇಶಿಸಲು ಅನುಕೂಲ ಮಾಡಿಕೊಡುವಂತೆ ದೆಹಲಿ ಅಬಕಾರಿ ನೀತಿ 2021-22 ಅನ್ನು ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಅನುಷ್ಠಾನಗೊಳಿಸಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಎಲ್-1 ಪರವಾನಗಿಯನ್ನು ಅನುಮೋದನೆ ಇಲ್ಲದೆಯೇ ವಿಸ್ತರಿಸುವಲ್ಲಿ ಲಂಚ ಪಡೆಯಲಾಗಿದೆ. ಲಂಚ ಪಡೆದು ಕಂಪೆನಿಗಳಿಗೆ ಸಾಕಷ್ಟು ಅನುಕೂಲ ಮಾಡಿಕೊಡಲಾಗಿದೆ ಎಂಬ ಗಂಭೀರ ಆರೋಪ ದೆಹಲಿ ಸರ್ಕಾರದ ಮೇಲಿದೆ. ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ಎಎಪಿ ನಾಯಕರು ಅಬಕಾರಿ ನೀತಿಯಲ್ಲಿ 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.

ಸಿಎಂ ಕೇಜ್ರಿವಾಲ್ ಬಂದನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನಿಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡಲು ಸರ್ವಾಧಿಕಾರಿ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯ ಡಿಸಿಎಂ ಡಿ.ಕೆ ಶಿವಕುಮಾರ್​, ಈ ವಿಚಾರವಾಗಿ ನಾನು, ಸಿಎಂ ನಾಳೆ ಜಂಟಿ ಸುದ್ದಿಗೋಷ್ಠಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, ಎಎಪಿ ಪರ ಕಾಂಗ್ರೆಸ್​ ನಾಯಕರು ಬ್ಯಾಟ್​ ಬೀಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಎಎಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕೇಜ್ರಿವಾಲ್ ಪರ ಸುಪ್ರೀಂ ಕೋರ್ಟ್​ನಲ್ಲಿ ಏನು ತೀರ್ಪು ಬರುತ್ತೋ ಕಾದು ನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅರವಿಂದ್ ಕೇಜ್ರಿವಾಲ್ ಬಂಧಿಸಿದ್ದು ಯಾಕೆ..? ಏನಿದು 100 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಸ್?

https://newsfirstlive.com/wp-content/uploads/2024/03/KEJRIWAL.jpg

Load More