ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನೋಟಿಸ್
ನವೆಂಬರ್ 2ರಂದು ಕೇಜ್ರಿವಾಲ್ಗೆ ED ಗ್ರಿಲ್
ಚಾರ್ಜ್ಶೀಟ್ನಲ್ಲಿ ಸಿಎಂ ಕೇಜ್ರಿವಾಲ್ ಉಲ್ಲೇಖ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಕಳೆದ ಏಪ್ರಿಲ್ನಲ್ಲಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೇಜ್ರಿವಾಲರನ್ನು ವಿಚಾರಣೆಗೆ ಒಳಪಡಿಸಿತ್ತು. ಆದರೆ ಇದೀಗ ED ನವೆಂಬರ್ 2ರಂದು ಕೇಜ್ರಿವಾಲ್ಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹಾಗು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇನ್ನೂ ನ್ಯಾಯಾಂಗ ಬಂಧನದಲ್ಲಿ ವಿಚಾರಣೆಗೊಳಪಟ್ಟಿದ್ದಾರೆ.
ಜಾರಿ ನಿರ್ದೇಶನಾಲಯ ನೀಡಿರುವ ಚಾರ್ಜ್ಶೀಟ್ನಲ್ಲಿ ಕೇಜ್ರಿವಾಲ್ ಹೆಸರು ಹಲವು ಬಾರಿ ಉಲ್ಲೇಖವಾಗಿದೆ ಎನ್ನಲಾಗಿದೆ. ಈ ಸಂಬಂಧ ಇಡಿ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ