newsfirstkannada.com

ಸಚಿವರ ಮನವೊಲಿಕೆಗೆ ಒಪ್ಪದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ; ಬೇಡಿಕೆಗಳೇನು?

Share :

Published February 13, 2024 at 4:36pm

Update February 13, 2024 at 4:38pm

    ರಾಜ್ಯದ ಮೂಲೆ ಮೂಲೆಯಿಂದ ಫ್ರೀಡಂಪಾರ್ಕ್‌ಗೆ ಬಂದ ಆಶಾ ಕಾರ್ಯಕರ್ತೆಯರು

    ಬೆಂಗಳೂರಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರಿಂದ ದಿಢೀರ್​ ಪ್ರತಿಭಟನೆ

    ನಾಳೆಯೇ ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಭರವಸೆ ನೀಡುವಂತೆ ಆಗ್ರಹ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಮೂಲೆ ಮೂಲೆಯಿಂದ 5 ಸಾವಿರಕ್ಕೂ ಹೆಚ್ಚು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಲವು ಬೇಡಿಕೆಗಳಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡುತ್ತಿದ್ದಾರೆ.

ಇದನ್ನು ಓದಿ: ‘ಅಮಾವಾಸ್ಯೆ’ ಶಿಕ್ಷಕನ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್​; ಮಗಳ ಪ್ರೇಮದ ಮುಂದೆ ಅಮ್ಮನಿಗೆ ಬೇಡವಾಗಿದ್ದ ‘ಕರಿಮಣಿ ಮಾಲೀಕ’!

ಇದೇ ಫೆಬ್ರವರಿ 16ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದಕ್ಕೂ ಮೊದಲೇ ಸಿದ್ದು ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಆರ್‌ಸಿಎಚ್‌ ಮಿಷನ್ ಡ್ರೈರೆಕ್ಟರ್ ನವೀನ್ ಭಟ್ ಆಶಾ ಕಾರ್ಯಕರ್ತೆಯರು ಸಾಥ್​ ನೀಡಿದ್ದಾರೆ. ಈ ಬಗ್ಗೆ ಮಾತಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಆಶಾ ಕಾರ್ಯಕರ್ತೆಯರು ಎಲ್ಲಿ ಹೋದ್ರು ಎದ್ದು ಕಾಣ್ತಾರೆ. ನಮ್ಮ ಆಶಾಕಾರ್ಯಕರ್ತೆಯರು ಆರೋಗ್ಯ ಇಲಾಖೆಯಲ್ಲಿ ಪ್ರಮುಖ ಸೇವೆ ಮಾಡುತ್ತಿದ್ದಾರೆ. ನಿಮ್ಮ ಸೇವೆ ಇಲ್ಲದೇ ಇದ್ದಿದ್ದರೆ ನಮಗೆ ಜನರ ತಲುಪಲು ಸಾಧ್ಯವಾಗ್ತಿರಲಿಲ್ಲ. ನಾವು ಆಶಾ ಕಾರ್ಯಕರ್ತೆಯರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ನಾವು ಯಾವುದೇ ಹೋರಾಟ ತಪ್ಪಾಗಿ ಗ್ರಹಿಸುವುದಿಲ್ಲ. ನಿಮ್ಮ ಕೊಂದು ಕೊರತೆ, ಸಮಸ್ಯೆ ನಿಮಗೆ ಗೊತ್ತಿರುತ್ತೆ. ಯಾವುದೇ ಕ್ಷೇತ್ರದಲ್ಲಿ ಸಮಸ್ಯೆ ಇರುತ್ತೆ, ಅದನ್ನ ಸರಿಪಡಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮುಂದೆ ಆಶಾ ಕಾರ್ಯಕರ್ತೆಯರು ಇಟ್ಟ ಬೇಡಿಕೆಗಳೇನು?

  • ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಗೌರವಧನ ಹೆಚ್ಚಿಸಿ
  • ಕನಿಷ್ಠ 2000 ರೂಪಾಯಿ ಗೌರವಧನವನ್ನು ಹೆಚ್ಚಿಗೆ ಮಾಡಬೇಕು ಅಂತ ಆಗ್ರಹ
  • ತೀವ್ರವಾದ ಅನಾರೋಗ್ಯ ಹಾಗೂ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಪ್ರೋತ್ಸಾಹಧನ ನೀಡಿ
  • ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ನಿಗದಿತ ಪ್ರೋತ್ಸಾಹಧನ ನೀಡಬೇಕು
  • 5 ಲಕ್ಷ ರೂಪಾಯಿವರೆಗೆ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಇಡೀ ಕುಟುಂಬಕ್ಕೆ ನೀಡಬೇಕು
  • ಕಳೆದ 2 ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು
  • ಕಳೆದ 4 ವರ್ಷದಿಂದ ನೀಡದಿರುವ ಪ್ರತೀ ವರ್ಷ ನೀಡುವ ಡೈರಿಯನ್ನು ನಿಗದಿತ ಸಮಯಕ್ಕೆ ಒದಗಿಸಿ
  • ವಿವಿಧ ಸಮಸ್ಯೆಗಳ ಕಾರಣಗಳಿಂದ ಬಾಕಿಯಿರುವ ಪ್ರೋತ್ಸಾಹ ಧನವನ್ನು ನೀಡಲು ಕ್ರಮ ಕೈಗೊಳ್ಳಬೇಕು
  • ಹುದ್ದೆಗೆ ತಕ್ಕಂತೆ ಮಾಸಿಕ ವೇತನ, ಪ್ರಯಾಣ ಭತ್ಯೆ ಇತ್ಯಾದಿಗಳನ್ನು ಹೆಚ್ಚಿಸಬೇಕು
  • ನಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವರ ಮನವೊಲಿಕೆಗೆ ಒಪ್ಪದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ; ಬೇಡಿಕೆಗಳೇನು?

https://newsfirstlive.com/wp-content/uploads/2024/02/cm-1.jpg

Load More