ಅಶೋಕ್ ತಹಶೀಲ್ದಾರ್ ಪತ್ನಿ, ಸಹೋದರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿಯ ಎಸಿ ಕಚೇರಿಯಲ್ಲಿ ಗ್ರೇಡ್- 2 ತಹಶೀಲ್ದಾರ್ ಆಗಿ ಕಾರ್ಯ
ಪತ್ನಿ, ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ ಮೃತನ ಸಂಬಂಧಿಕರು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಹಾಗೂ ಗ್ರೇಡ್- 2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ಮೇಲೆ ತಹಶೀಲ್ದಾರ್ ಕುಟುಂಬಸ್ಥರು ಕೊಲೆ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಅಶೋಕ್ ಮಣ್ಣಿಕೇರಿ ಅವರು ಬೆಳಗಾವಿಯ ಎಸಿ ಕಚೇರಿಯಲ್ಲಿ ಗ್ರೇಡ್- 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಗರದ ಕಾಳಿ ಅಂಬ್ರಾಯ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ತಡರಾತ್ರಿ ಹೃದಯಾಘಾತ ಆಗಿದೆಂದು ಖಾಸಗಿ ಆಸ್ಪತ್ರೆಗೆ ಪತ್ನಿ ಮತ್ತು ಸಹೋದರ ದಾಖಲು ಮಾಡಿದ್ದರು. ಆದ್ರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅಶೋಕ್ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮೃತನ ಸಹೋದರಿ ಗಿರಿಜಾ ಸಾವಿನ ಬಗ್ಗೆ ತನಿಖೆ ಮಾಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಠಾಣೆ ಎದುರು ಮೃತನ ಸಂಬಂಧಿಕರು ಸ್ನೇಹಿತರು ಜಮಾವಣೆಯಾಗಿದ್ದರು. ಈ ವೇಳೆ ಠಾಣೆಗೆ ಬಂದಿದ್ದ ಪತ್ನಿ ಭೂಮಿ ಮತ್ತು ಸಹೋದರ ಸ್ಯಾಮ್ಯುಯಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ತಕ್ಷಣ ಪೊಲೀಸರು ರಕ್ಷಣೆಗೆ ಧಾವಿಸಿ ಇಬ್ಬರನ್ನು ಬೇರೆ ಕಡೆ ಕರೆದೊಯ್ದಿದ್ದಾರೆ.
2018ರ ಚುನಾವಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದಾಗ ಅಶೋಕ್ ಮಣ್ಣೀಕೇರಿ ಅವರ ಆಪ್ತ ಸಹಾಯಕರಾಗಿದ್ದರು. ಇವರ ಅಕಾಲಿಕ ನಿಧನಕ್ಕೆ ಸಚಿವೆ ಸಂತಾಪ ಸೂಚಿಸಿದ್ದು ಅಶೋಕ್ ಮಣ್ಣಿಕೇರಿ ನಿಧನ ತೀವ್ರ ನೋವುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನನ್ನ ಆಪ್ತ ಸಹಾಯಕರಾಗಿದ್ದ ಅಶೋಕ ಮಣ್ಣಿಕೇರಿಯವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ಕಳೆದುಕೊಂಡಿರುವುದು ದೊಡ್ಡ ನಷ್ಟವೆನಿಸುತ್ತಿದೆ.
ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ಕರುಣಿಸಲೆಂದು… pic.twitter.com/kUiVnhWPuk
— Laxmi Hebbalkar (@laxmi_hebbalkar) June 29, 2023