newsfirstkannada.com

ಅಂಗಾಂಗ ದಾನಕ್ಕೆ ರಾಯಭಾರಿ ಆಗ್ತಾರಾ ಅಶ್ವಿನಿ ಪುನೀತ್ ರಾಜಕುಮಾರ್‌..?

Share :

02-08-2023

    ಆರೋಗ್ಯ ಇಲಾಖೆ ಜತೆ ಅಶ್ವಿನಿ ಪುನೀತ್ ರಾಜಕುಮಾರ್ ಮಾತುಕತೆ!

    ಜ್ಞಾನಜ್ಯೋತಿ ಸಭಾಂಗಣದಲ್ಲಿ ಅದ್ಧೂರಿ ಅಂಗಾಂಗ ದಾನ ದಿನಾಚರಣೆ

    ಮುಖ್ಯ ಅತಿಥಿಯಾಗಿ ಅಶ್ವಿನಿ ಪುನೀತ್​ ರಾಜಕುಮಾರ್​ಗೆ ಆಹ್ವಾನ..!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹಲವರು ತಮ್ಮ ಅಂಗಾಂಗವನ್ನು ದಾನ ಮಾಡಲು ಮುಂದಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಅಂಗಾಂಗ ಬೇಡಿಕೆಗಳು ಹೆಚ್ಚುತ್ತಿದೆ. ದೊಡ್ಮನೆ ಕುಟುಂಬ ಕೂಡ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನು ಗಮನಿಸಿದ್ದೇವೆ. ವರನಟ ಡಾ. ರಾಜ್‌ಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದರು. ತಂದೆಯ ಆದರ್ಶವನ್ನು ಅನುಸರಿಸಿದ ಮಗ ಕರ್ನಾಟಕ ರತ್ನ​​ ಪುನೀತ್ ರಾಜ್‌ಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿ 8 ಜನರ ಬಾಳಿಗೆ ಬೆಳಕು ಚೆಲ್ಲಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರು ಕಣ್ಣುಗಳನ್ನು ದಾನ ಮಾಡಿದ ಬಳಿಕ ಇದರಿಂದ ಪ್ರೇರಣೆಗೊಂಡು ರಾಜ್ಯದಲ್ಲಿ ಸಾವಿರಾರು ಜನರು ಅಂಗಾಂಗ ದಾನ ಮಾಡಲು ಮುಂದಾಗಿದ್ದರು. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

ನಾಳೆ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಜ್ಞಾನಜ್ಯೋತಿ ಸಂಭಾಗಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನ ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಅಶ್ವಿನಿ ಪುನೀತ್​ ರಾಜಕುಮಾರ್ ಆಗಮಿಸಲಿದ್ದಾರೆ. ಈ ವೇಳೆ ಅಶ್ವಿನಿ ಅವರನ್ನ ಅಂಗಾಂಗ ದಾನ ರಾಯಭಾರಿಯಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಜೊತೆ ಅಶ್ವಿನಿ ಮಾತುಕತೆ ನಡೆಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ 150 ಕುಟುಂಬಗಳಿಗೆ ಸನ್ಮಾನ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಶಾಸಕರು ಹಾಗೂ ಸಚಿವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

ಅಂಗಾಂಗ ದಾನಕ್ಕೆ ರಾಯಭಾರಿ ಆಗ್ತಾರಾ ಅಶ್ವಿನಿ ಪುನೀತ್ ರಾಜಕುಮಾರ್‌..?

https://newsfirstlive.com/wp-content/uploads/2023/08/ashwini.jpg

Load More