ಪಾಕಿಸ್ತಾನ ಮಣಿಸಿ ಬೀಗಿದ ಶ್ರೀಲಂಕಾ
ಸೆಪ್ಟೆಂಬರ್ 17 ರಂದು ಫೈನಲ್ ಪಂದ್ಯ
ಇವತ್ತು ಭಾರತ-ಬಾಂಗ್ಲಾ ಸೆಣಸಾಟ
ಏಷ್ಯಾಕಪ್ ಟೂರ್ನಿಯ ಸೂಪರ್-4 ಪಂದ್ಯದಲ್ಲಿ ಟೀಮ್ ಇಂಡಿಯಾ ಇಂದು ಬಾಂಗ್ಲಾದೇಶ ತಂಡವನ್ನ ಎದುರಿಸಲಿದೆ. ಕೊಲಂಬೋದ ಪ್ರೇಮದಾಸ ಮೈದಾನದಲ್ಲಿ ಪಂದ್ಯ ನಡೆಯಲಿದೆ.
ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಿನ್ನೆ ಭರ್ಜರಿ ಅಭ್ಯಾಸ ನಡೆಸಿದೆ. ಇಂಜುರಿಯಿಂದ ಹೊರ ಬಿದ್ದಿರುವ ಶ್ರೇಯಸ್ ಅಯ್ಯರ್ ಕೂಡ ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ. ಇವತ್ತು ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈಗಾಗಲೇ ಫೈನಲ್ ಪ್ರವೇಶಿಸಿರುವ ಟೀಮ್ ಇಂಡಿಯಾ ಪಾಲಿಗೆ ಇದೊಂದು ಔಪಚಾರಿಕ ಪಂದ್ಯವಾಗಿದೆ. ಈಗಾಗಲೇ ಬಾಂಗ್ಲಾದೇಶ ತಂಡ ಕೂಡ ಟೂರ್ನಿಯಿಂದ ಹೊರಬಿದ್ದಿದೆ.
ಇನ್ನು ನಿನ್ನೆಯ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಶ್ರೀಲಂಕಾ ಡಿಎಎಲ್ಎಸ್ ನಿಯಮದ ಪ್ರಕಾರ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಪಾಕಿಸ್ತಾನ 7 ವಿಕೆಟ್ ಕಳೆದುಕೊಂಡು 252 ರನ್ಗಳಿಸಿತ್ತು. ಲಂಕಾ ಬ್ಯಾಟಿಂಗ್ಗೆ ಮಳೆರಾಯ ಕಾಟ ಕೊಟ್ಟ. ಆದರೂ ಲಂಕಾ ಪರ ಕುಶಾಲ್ ಮೆಂಡಿಸ್ 91, ಸದೀರಾ 48, ಚರಿತ್ 48 ರನ್ಗಳಿಸಿ ಗಮನ ಸೆಳೆದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ