ಸದ್ಯದಲ್ಲೇ ನಡೆಯಲಿರೋ 2023 ಏಷ್ಯಾಕಪ್ ಟೂರ್ನಿ
2023 ಏಷ್ಯಾಕಪ್ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ..!
ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್ ಕಮ್ಬ್ಯಾಕ್
ಸದ್ಯ ನಡೆಯುತ್ತಿರೋ ಐರ್ಲೆಂಡ್ ವಿರುದ್ಧದ ಟಿ20 ಸೀರೀಸ್ ಬೆನ್ನಲ್ಲೇ 2023ರ ಏಕದಿನ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಆಗಸ್ಟ್ 30ನೇ ತಾರೀಕಿನಿಂದ ನಡೆಯಲಿರೋ ಏಷ್ಯಾಕಪ್ ಟೂರ್ನಿಗೆ ಕೊನೆಗೂ ಬಲಿಷ್ಠ ಟೀಂ ಇಂಡಿಯಾ ಅನೌನ್ಸ್ ಮಾಡಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ನಂತರ ಸೆಲೆಕ್ಷನ್ ಕಮಿಟೀ 17 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಿದೆ.
ಈ ಬಾರಿಯೂ ಏಷ್ಯಾಕಪ್ನಲ್ಲಿ ಟೀಂ ಇಂಡಿಯಾವನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ಬಿಸಿಸಿಐ ಅಳೆದು ತೂಗಿ ಬಲಿಷ್ಠ ತಂಡವನ್ನೇ ಅನೌನ್ಸ್ ಮಾಡಿದೆ.
ಏಷ್ಯಾಕಪ್ ತಂಡದಲ್ಲಿ ಶುಭ್ಮನ್ ಗಿಲ್ ಸ್ಥಾನ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಬಹಳ ದಿನಗಳ ಬಳಿಕ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕಮ್ಬ್ಯಾಕ್ ಮಾಡಿದ್ದಾರೆ. ಯುವ ಆಟಗಾರ ತಿಲಕ್ ವರ್ಮಾಗೂ ಚಾನ್ಸ್ ನೀಡಲಾಗಿದೆ.
ಜತೆಗೆ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆದ್ದಾರೆ. ಕುಲದೀಪ್ ಯಾದವ್ ಸ್ಪಿನ್ನರ್ ಆಗಿ, ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ಗೆ ಮಣೆ ಹಾಕಲಾಗಿದೆ. ಸಂಜು ಸ್ಯಾಮ್ಸನ್ ಸ್ಟ್ಯಾಂಡ್ ಬೈ ಆಟಗಾರರಾಗಿ ಆಯ್ಕೆ ಆಗಿದ್ದಾರೆ.
ಏಷ್ಯಾಕಪ್‌ಗಾಗಿ ಭಾರತ ತಂಡ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ವೈಸ್ ಕ್ಯಾಪ್ಟನ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ