newsfirstkannada.com

ಉಡುಪಿಯಲ್ಲಿ ಬರ್ಬರ ಹತ್ಯೆ; ಹೆಂಡತಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಚುಚ್ಚಿ ಕೊಂದ ದುಷ್ಕರ್ಮಿಗಳು

Share :

12-11-2023

    ಒಂದೇ ಕುಟುಂಬದ ನಾಲ್ವರು ಕೊಲೆಯಾದ ಘಟನೆ

    ಪತಿ ವಿದೇಶದಲ್ಲಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು

    ಪ್ರಾರಂಭದಲ್ಲಿ ಮಾತಿನ ಚಕಮಕಿ ನಡೆದು, ಬಳಿಕ ಕೊಲೆ

ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆಯಾದ ಘಟನೆ ಉಡುಪಿ ಜಿಲ್ಲೆಯ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ನಡೆದಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ದುರ್ಷರ್ಮಿಗಳು ಚೂರಿಯಿಂದ ಚುಚ್ಚಿ ಹತ್ಯೆಗೈದಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಕೊಲೆಯಾದ ದುರ್ದೈವಿಗಳು.

ದುಷ್ಕರ್ಮಿಗಳು ಏಕಾಏಕಿ ಹಸೀನಾ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆಸಿದ್ದಾರೆ. ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್ ಗೆ ಮೊದಲು ಚೂರಿಯಿಂದ ಇರಿದಿದ್ದಾರೆ. ಬಳಿಕ ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ಆತನನ್ನು ದುಷ್ಕರ್ಮಿಗಳು ಇರಿದು ಕೊಂದಿದ್ದಾರೆ.

ನೆರೆ ಮನೆಯವರ ಬೊಬ್ಬೆ ಕೇಳಿ ಪಕ್ಕದ ಮನೆ ಯುವತಿ  ಹೊರಗಡೆ ಬಂದಿದ್ದಾಳೆ. ಈ ವೇಳೆ ದುಷ್ಕರ್ಮಿಗಳು ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದುಷ್ಕರ್ಮಿಗಳಿಂದ ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯಗಳಾಗಿವೆ.

ಇನ್ನು ಕೊಲೆಯಾದ  ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಈ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದಾರೆ.  ಸ್ಥಳಕ್ಕೆ  ಎಸ್ ಪಿ ಅರುಣ್ ಕುಮಾರ್ ಮತ್ತು ಮಲ್ಪೆ ಪೊಲೀಸರು  ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉಡುಪಿಯಲ್ಲಿ ಬರ್ಬರ ಹತ್ಯೆ; ಹೆಂಡತಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಚುಚ್ಚಿ ಕೊಂದ ದುಷ್ಕರ್ಮಿಗಳು

https://newsfirstlive.com/wp-content/uploads/2023/11/UDUPI-Murder.jpg

Load More