ಎಷ್ಟು ಕೋಟಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ?
ಸಿಸೋಡಿಯಾ ಪತ್ನಿಯ ಆಸ್ತಿಯೂ ಮುಟ್ಟುಗೋಲು
ಜೈಲು ಸೇರಿರುವ ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಹಾಗೂ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಸಿಸೋಡಿಯಾ, ಅವರ ಪತ್ನಿ ಸೀಮಾ ಸೋಸೋಡಿಯಾಗೆ ಸೇರಿದ ಒಟ್ಟು 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
52 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
‘ದೆಹಲಿ ಅಬಕಾರಿ ಪಾಲಿಸಿ’ ಹಗರಣದಲ್ಲಿ ಸಿಸೋಡಿಯಾರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದಿದ್ದಕ್ಕೆ ಸಿಸೋಡಿಯಾ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, 52 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇನ್ನು ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಯಲ್ಲಿ ಸಿಸೋಡಿಯಾ ಪತ್ನಿಗೆ ಸೇರಿದ ಎರಡು ಪ್ರಾಪರ್ಟಿಗಳು ಹಾಗೂ ಸಂಬಂಧಿ ರಾಜೇಶ್ ಜೋಶಿ ಮತ್ತು ಗೌತಮ್ ಮಲ್ಹೋತ್ರಾಗೆ ಸೇರಿದ ಆಸ್ತಿಗಳನ್ನು ಪಿಎಂಎಲ್ ಕಾಯ್ದೆ ಅಡಿಯಲ್ಲಿ (Prevention of Money Laundering Act) ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇ.ಡಿ ಅಧಿಕಾರಿಗಳ ಪ್ರಕಾರ, ಮನೀಸ್ ಸಿಸೋಡಿಯಾ ಬ್ಯಾಂಕ್ ಬ್ಯಾಲೆನ್ಸ್ 11.49 ಲಕ್ಷ ರೂಪಾಯಿ ಇದೆ. ಅವರಿಗೆ ಸೇರಿದ ಬ್ರೈಂಡ್ಕೋ ಸೇಲ್ಸ್ ಪ್ರೈವೆಟ್ ಲಿಮಿಟೆಡ್ನ ಒಟ್ಟು ಆಸ್ತಿ 16.45 ಕೋಟಿ ಎಂದು ತಿಳಿಸಿದೆ.
ಮನಿಷ್ ಸಿಸೋಡಿಯಾರನ್ನು ಸಿಬಿಐ ಅಧಿಕಾರಿಗಳು ಫೆಬ್ರವರಿ 26 ರಂದು ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧಿಸಿದೆ. Delhi Excise Policy 2021-22 ಹಗರಣದಲ್ಲಿ ಸಿಸೋಡಿಯಾ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಿಸೋಡಿಯಾರನ್ನು ಸಿಬಿಐ ಅಧಿಕಾರಿಗಳು ಹಲವು ಬಾರಿ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ಸದ್ಯ ಅವರು ಸಿಬಿಐ ಮತ್ತು ಇಡಿ ಅಧಿಕಾರಿಗಳಿಂದ ತನಿಖೆ ಎದುರಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ