/newsfirstlive-kannada/media/post_attachments/wp-content/uploads/2025/01/ATM-ROBBERY3.jpg)
ಬೀದರ್: ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿರೋ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ನಡೆದಿದೆ. ATMಗೆ ಹಣ ಹಾಕಲು ಬಂದ ಸಿಬ್ಬಂದಿಗೆ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಗವಿಸಿದ್ದೇಶ್ವರ ಜಾತ್ರೆಯ ಸ್ಪೆಷಲ್ ಮಿರ್ಚಿ ಬಜ್ಜಿ.. ಇದರ ವಿಶೇಷತೆ ಏನು ಗೊತ್ತಾ? ಇಂಟ್ರೆಸ್ಟಿಂಗ್ ಮಾಹಿತಿ!
ಗುಂಡು ಹಾರಿಸಿದ ಪರಿಣಾಮ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಗಿರಿ ವೆಂಕಟೇಶ್ ಎಂಬುವವರು ಉಸಿರು ನಿಲ್ಲಿಸಿದ್ದರು. ಅಲ್ಲದೇ ಮತ್ತೊಬ್ಬ ಸಿಬ್ಬಂದಿ ಶಿವಕುಮಾರ್ ಎಂಬುವವರಿಗೂ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ಈ ವಿಚಾರ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನೂ, ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ PSC ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಅನ್ನುವಷ್ಟರಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಅಸುನೀಗಿದ್ದಾರೆ.
ಇನ್ನೂ, ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರೋ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞರ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹಣ ಹೊತ್ತೊಯ್ದ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ