ಕೆನರಾ ಬ್ಯಾಂಕ್ ಎಟಿಎಂ ಮೇಲೆ ಕಣ್ಣಿಟ್ಟಿದ್ದ ಕಳ್ಳರು
ಗ್ಯಾಸ್ ಕಟರ್ನಿಂದ ಶೆಟರ್ ಮುರಿದು ಕಳ್ಳತನ
13 ಲಕ್ಷ ರೂಪಾಯಿ ಕಳ್ಳತನ ಮಾಡಿಕೊಂಡು ಪರಾರಿ
ಕಲಬುರಗಿ: ಕೆನರಾ ಬ್ಯಾಂಕ್ ಎಟಿಎಂ ಒಡೆದು ಕಳ್ಳತನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ನಸುಕಿನ ಜಾವ ನಾಲ್ಕು ಗಂಟೆಗೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ನಡೆಸಿರುವುದು ಬಯಲಾಗಿದೆ.
ಬುಲೆರೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ಕಳ್ಳತನ ಮಾಡಿದ್ದಾರೆ. ಎಟಿಎಂನಲ್ಲಿದ್ದ ಬರೋಬ್ಬರಿ 13 ಲಕ್ಷ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಕಳ್ಳರು ಎಟಿಎಂ ಹೊರ ಭಾಗದಲ್ಲಿದ್ದ ಸಿಸಿಟಿವಿಗೆ ಮಂಜು ಕವಿಯೋ ಹಾಗೆ ಸ್ಪ್ರೇ ಮಾಡಿದ್ದಾರೆ. ಬಳಿಕ ಗ್ಯಾಸ್ ಕಟರ್ ನಿಂದ ಶೆಟರ್ ಮುರಿದು ಒಳ ಹೋಗಿ ಎಟಿಎಂ ಕಳ್ಳತನ ಮಾಡಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ