/newsfirstlive-kannada/media/post_attachments/wp-content/uploads/2025/04/JAMMU_KASMIR_1.jpg)
ಶ್ರೀನಗರ: ಜಮ್ಮುಕಾಶ್ಮೀರದ ಅನಂತ​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಟೆರರ್​ ಅಟ್ಯಾಕ್ ನಡೆದಿದೆ. ಹನಿಮೂನ್​​ಗೆ ಹೋದವರ ಮೇಲೂ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದರಿಂದ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ.
ನವದಂಪತಿ ಕಾಶ್ಮೀರದ ಪ್ರವಾಸ ಹಾಗೂ ಅವರ ಹನಿಮೂನ್​ಗಾಗಿ ತೆರಳಿದ್ದರು. ಪ್ರವಾಸದ ವೇಳೆ ಹೋಟೆಲ್​​ವೊಂದರಲ್ಲಿ ಕುಳಿತು ಬೇಲ್​ಪೂರಿ ತಿನ್ನುವಾಗ ಪಕ್ಕದಲ್ಲಿದ್ದ ಭಯೋತ್ಪಾಕದ ಅಲ್ಲಿದ್ದವರ ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿದ್ದಾನೆ. ತಮ್ಮ ಧರ್ಮದವರನ್ನು ಬಿಟ್ಟು ಅನ್ಯಧರ್ಮಿಯರ ಮೇಲೆ ಗುಂಡು ಹಾರಿಸಿ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಗಂಡನನ್ನ ಕಳೆದುಕೊಂಡ ಮಹಿಳೆ ಅಳುತ್ತ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ.
/newsfirstlive-kannada/media/post_attachments/wp-content/uploads/2025/04/SMG_MANJUNATH.jpg)
ಇನ್ನು ಈ ಘಟನೆಯಲ್ಲಿ ಶಿವಮೊಗ್ಗದ ಮಂಜುನಾಥ್ ಎನ್ನುವರು ಪ್ರಾಣ ಕಳೆದುಕೊಂಡಿದ್ದಾರೆ. ಇವರು ಪ್ರವಾಸಕ್ಕೆಂದು ತಮ್ಮ ಕುಟುಂಬದ ಜೊತೆ ಜಮ್ಮುಕಾಶ್ಮೀರಕ್ಕೆ ಹೋಗಿದ್ದರು. ಪ್ರವಾಸದ ಖುಷಿಯಲ್ಲಿದ್ದ ಮಂಜುನಾಥ್ ಸೇರಿ ಕೆಲವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಘಟನೆಯಲ್ಲಿ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದಾರೆ.
ಅಮಿತ್ ಶಾ ಭೇಟಿ
ಜಮ್ಮುಕಾಶ್ಮೀರದಲ್ಲಿ ಉಗ್ರರು ಮತ್ತೆ ಬಾಲಬಿಚ್ಚಿದ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದೇ ದೆಹಲಿಯಿಂದ ಶ್ರೀನಗರಕ್ಕೆ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಶ್ರೀನಗರದಲ್ಲಿ ಉನ್ನತ ಅಧಿಕಾರಿಗಳ ಜೊತೆ ಭದ್ರತಾ ದೃಷ್ಟಿಯಿಂದ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಟೂರಿಸ್ಟ್​ಗಳ ಮೇಲೆ ಏಕಾಏಕಿ ಗುಂಡಿನ ದಾಳಿ.. ಜೀವ ಬಿಟ್ಟ ಕನ್ನಡಿಗ; 6 ಜನರ ಸ್ಥಿತಿ ಗಂಭೀರ!
/newsfirstlive-kannada/media/post_attachments/wp-content/uploads/2025/04/SIDDARAMAIAH-2.jpg)
ಕನ್ನಡಿಗರ ಮೇಲೆ ಉಗ್ರರ ದಾಳಿ, ಸಿಎಂ ಸಿದ್ದರಾಮಯ್ಯ ಸಭೆ
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಮುಂದಿನ ಕ್ರಮಗಳನ್ನು ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us