/newsfirstlive-kannada/media/post_attachments/wp-content/uploads/2025/02/bagappa-1.jpg)
ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ.. ನಿನ್ನೆ ರಾತ್ರಿ 8:50ರ ಸುಮಾರಿಗೆ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ..
ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು.. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ.. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ 8:50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ