/newsfirstlive-kannada/media/post_attachments/wp-content/uploads/2025/01/SAIFE-ALI-KHAN.jpg)
ಬಾಲಿವುಡ್ ನಿರ್ಮಾಪಕ,​ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿಯಾಗಿದ್ದು, ನಟನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಇತ್ತ ಸೈಫ್ ಅಲಿ ಖಾನ್ ಆರೋಗ್ಯದ ಬಗ್ಗೆ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ.
ಬಾಂಧ್ರಾ ನಿವಾಸಕ್ಕೆ ಮಧ್ಯರಾತ್ರಿ 2.30ರ ಸುಮಾರಿಗೆ ವ್ಯಕ್ತಿಯೊಬ್ಬ ನುಗ್ಗಿ ದಾಳಿ ಮಾಡಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಘಟನೆ ಸಂಬಂಧ ಮಾಹಿತಿ ನೀಡಿರುವ ಮುಂಬೈ ಪೊಲೀಸ್ ಡಿಸಿಪಿ.. ಅಪರಿಚಿತ ವ್ಯಕ್ತಿಯೊಬ್ಬ ನಟ ಸೈಫ್ ಅಲಿ ಖಾನ್ ಮನೆಗೆ ಪ್ರವೇಶಿಸಿದ್ದಾನೆ. ನಟ ಮತ್ತು ಒಳನುಗ್ಗಿದ ವ್ಯಕ್ತಿಯ ಜೊತೆ ಮಾತಿನ ಚಕಮಕಿ ನಡೆದಿದೆ. ನಂತರ ಚಾಕುವಿನಿಂದ ದಾಳಿ ಮಾಡಲಾಗಿದ್ದು, ನಟ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:BREAKING ಸೈಫ್ ಅಲಿ ಖಾನ್ ಮೇಲೆ ಮಧ್ಯರಾತ್ರಿ ಚಾಕುವಿನಿಂದ ಅಟ್ಯಾಕ್
ಮೊದಲು ಮನೆ ಕೆಲಸದವಳ ಜೊತೆ ಕಿರಿಕ್..!
ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ವ್ಯಕ್ತಿ ಮನೆಯ ಸೇವಕಿಯೊಂದಿಗೆ ಜಗಳವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗ ಸೈಫ್ ಅಲಿ ಖಾನ್ ಮಧ್ಯಪ್ರವೇಶಿಸಿ ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಫ್ ಅಲಿ ಖಾನ್​​ಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿಯಲ್ಲಿ ಸೈಫ್ ಅಲಿ ಖಾನ್ ಗಾಯಗೊಂಡಿದ್ದಾರೆ. ಕತ್ತಿನ ಹಿಂಭಾಗ ಮತ್ತು ಎಡಗೈಗೆ 10 ಸೆಂ.ಮೀ ಗಾಯವಾಗಿದೆ. ಬೆನ್ನು ಭಾಗಕ್ಕೂ ಗಾಯವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಸೈಫ್ ಅಲಿ ಖಾನ್ ಕುತ್ತಿಗೆ ಚಾಕು ಇರಿದ ಕಳ್ಳರು.. 10 ಸೆಂಟಿ ಮೀಟರ್ ಗಾಯ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us