newsfirstkannada.com

ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ; ಮಕ್ಕಳಿಂದ ಮಹಿಳೆ ಮೇಲೆ ಇಟ್ಟಿಗೆಯಿಂದ ಹಲ್ಲೆ

Share :

09-11-2023

    ಕುಟುಂಬಸ್ಥರಿಂದ ಮಹಿಳೆ ಹಾಗೂ ಅವಳ ಅಕ್ಕನ ಮೇಲೆಯೂ ದಾಳಿ

    ಕೆಲಸದಿಂದ ಮುಗಿಸಿ ಹೊರಡುವ ವೇಳೆ ಕುಟುಂಬಸ್ಥರಿಂದ ಹಲ್ಲೆ!

    ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು

ಹುಬ್ಬಳ್ಳಿ: ಮಹಿಳೆಯನ್ನು ಅಟ್ಟಾಡಿಸಿ ಇಟ್ಟಂಗಿಯಿಂದ (ಇಟ್ಟಿಗೆ) ಹೊಡೆದು ಹಲ್ಲೆ ಮಾಡಿರೋ ಘಟನೆ ವಿದ್ಯಾನಗರದ ಕಿಮ್ಸ್ ಹಿಂಭಾಗದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇತ್ತು ಎಂದು ಹೇಳಲಾಗುತ್ತಿದೆ. ಆ ಮಹಿಳೆಯು ವ್ಯಕ್ತಿಯ ಮೇಲೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳಂತೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್​ನಲ್ಲಿ ಆಯಾ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಕುಟುಂಬಸ್ಥರು ಚಪ್ಪಲಿ ಹಾಗೂ ಇಟ್ಟಂಗಿಯಿಂದ ಹಲ್ಲೆ ನಡೆಸಿದ್ದಾರೆ.

ಇತ್ತ ಹಲ್ಲೆಗೊಳಗಾದ ತಂಗಿಯನ್ನು ಬಿಡಿಸಲು ಬಂದ ಅಕ್ಕನ ಮೇಲೆಯೂ ಹಲ್ಲೆ ಮಾಡಿದ್ದಾರೆ. ಇಬ್ಬರ ಮೇಲೆ ಸಾರ್ವಜನಿಕ ಸ್ಥಳದಲ್ಲೇ ಕುಟುಂಬಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ; ಮಕ್ಕಳಿಂದ ಮಹಿಳೆ ಮೇಲೆ ಇಟ್ಟಿಗೆಯಿಂದ ಹಲ್ಲೆ

https://newsfirstlive.com/wp-content/uploads/2023/11/death-2023-11-09T080342.464.jpg

Load More