ಸಿ.ಟಿ ರವಿ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆಗೆ ಯತ್ನ; ಅಸಲಿಗೆ ಆಗಿದ್ದೇನು?

author-image
admin
Updated On
ಸಿ.ಟಿ ರವಿ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆಗೆ ಯತ್ನ; ಅಸಲಿಗೆ ಆಗಿದ್ದೇನು?
Advertisment
  • ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಬಂದಾಗ ಹಲ್ಲೆ ಯತ್ನ!
  • ಕೂಡಲೇ ಸಿ.ಟಿ ರವಿ ಸಹಾಯಕ್ಕೆ ಧಾವಿಸಿ ರಕ್ಷಿಸಿದ ಪೊಲೀಸರು
  • ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ ರವಿ ನಡುವೆ ವಾಕ್ಸಮರ

ಬೆಳಗಾವಿ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಇಂದು ರಣಾಂಗಣವೇ ಸೃಷ್ಟಿಯಾಗಿತ್ತು. ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಹೆಬ್ಬಾಳ್ಕರ್ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಟಿ ರವಿ ಅವರು ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆಗೆ ಯತ್ನ ಮಾಡಿದರು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಸಿ.ಟಿ ರವಿ ಅವರ ಸಹಾಯಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಹಲ್ಲೆಗೂ ಮುಂದಾದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರನ್ನ ತಡೆದ ಪೊಲೀಸರು ಬಂಧಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಆರೋಪಕ್ಕೆ ಸಿ.ಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ.

publive-image

ಆರೋಪಕ್ಕೆ ಸಿ.ಟಿ ರವಿ ಹೇಳಿದ್ದೇನು?
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರ ಆಕ್ರೋಶಕ್ಕೆ ಸಿ.ಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಆ ರೀತಿ ಮಾತಾಡಲ್ಲ. ವಿಷಯಾಂತರ ಮಾಡಲು ಈ ರೀತಿ ಹೇಳುತ್ತಿದ್ದಾರೆ. ಹೆಣ್ಣು ಮಕ್ಕಳ ಮೇಲೆ ನನಗೆ ಗೌರವ ಇದೆ. ಇಂಥದಕ್ಕೆಲ್ಲಾ ನಾನು ಹೆದರುವವನಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರದಿಂದ 3 ಭರ್ಜರಿ ಗುಡ್​ನ್ಯೂಸ್​..! 

ಸಿಟಿ ರವಿ V/S ಲಕ್ಷ್ಮೀ ಹೆಬ್ಬಾಳ್ಕರ್
ವಿಧಾನಪರಿಷತ್‌ ಕಲಾಪದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಅಂಬೇಡ್ಕರ್​ಗೆ ಅವಮಾನದ ವಿಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ ರವಿ ನಡುವೆ ವಾಕ್ಸಮರ ನಡೆಯಿತು.

ಪರಿಷತ್‌ನಲ್ಲಿ ಪ್ರತಿಭಟಿಸುವಾಗ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರು ಡ್ರಗ್ ಅಡಿಕ್ಟ್ ಅಂತ ಕರೆದಿದ್ದಾರೆ ಎನ್ನಲಾಗಿದೆ. ಆಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಮಿತ್ ಶಾರನ್ನ ಕೊಲೆಗಡುಕ ಅಂತಾ ಕರೆಯಬಹುದಾ ಎಂದು ಪ್ರಶ್ನಿಸಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅವರು Pro*stitute (ವೇ*) ಎಂಬ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment