ಅಹಮದಾಬಾದ್ನಲ್ಲಿ ಭಾರತ-ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ ಫೈನಲ್
ಟಾಸ್ ಪ್ರಕ್ರಿಯೆ ಮುಕ್ತಾಯ, ಇನ್ನೇನಿದ್ದರೂ ಕಪ್ಗಾಗಿ ಇಬ್ಬರು ಸೆಣಸಾಟ
ಬಲಿಷ್ಠ ಆಸ್ಟ್ರೇಲಿಯಾ ಟೀಮ್ಗೆ ಟಕ್ಕರ್ ಕೊಡುತ್ತಾ ಟೀಮ್ ಇಂಡಿಯಾ
ಗುಜರಾತ್ನ ನರೆಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ನ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದುಕೊಂಡು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೀಮ್ ಇಂಡಿಯಾವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಧೀರನಾಗಿ ಭಾರತ ತಂಡ ಎಲ್ಲ 10 ಪಂದ್ಯಗಳನ್ನು ಗೆದ್ದು ಬೀಗಿದೆ. ಸದ್ಯ ಇವತ್ತು ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ವರ್ಲ್ಡ್ಕಪ್ ಗೆಲ್ಲುವ ನಿರೀಕ್ಷೆಯಲ್ಲಿ ರೋಹಿತ್ ಶರ್ಮಾ ಟೀಮ್ ಮೈದಾನಕ್ಕೆ ಇಳಿದಿದೆ. ಈಗಾಗಲೇ ಬೇಕಾದ ಎಲ್ಲ ಸಿದ್ದತೆಗಳನ್ನು ಆಟಗಾರರು ಮಾಡಿಕೊಂಡಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಪ್ಲೇಯರ್ಸ್ಗೆ ಬೇಕಾದಂತಹ ಸಲಹೆ, ಸೂಚನೆಗಳನ್ನು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಇನ್ನು ವಿಶ್ವಕಪ್ ಫೈನಲ್ ಮ್ಯಾಚ್ನಲ್ಲಿ ಎಂದಿನಂತೆ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಓಪನರ್ ಆಗಿ ಕ್ರೀಸ್ಗೆ ಆಗಮಿಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಇನ್ನು ಆಲ್ ರೌಂಡರ್ ಆಗಿ ರವೀಂದ್ರ ಜಡೇಜಾ ಕಣದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯನಿಗೆ ಅವಕಾಶ ಮಾಡಿಕೊಡಲಾಗಿದೆ.
ಇನ್ನು ಭಾರತವು ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿದ್ದು ಎದುರಾಳಿ ಆಸಿಸ್ ಮೇಲೆ ಮಾರಾಕವಾಗಿ ದಾಳಿ ಮಾಡಿ ವಿಕೆಟ್ ಪಡೆಯುವ ನಿರೀಕ್ಷೆಯಲ್ಲಿದೆ. ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಮೈದಾನದಲ್ಲಿ ಬೌಲಿಂಗ್ ಮಾಡಲಿದ್ದಾರೆ.
ಈಗಾಗಲೇ 5 ವಿಶ್ವಕಪ್ ಗೆದ್ದಿರುವ ಕಾಂಗರೂ ಟೀಮ್ ಫೈನಲ್ಗೆ ಬೇಕಾದ ಎಲ್ಲ ರೀತಿಯ ತಂತ್ರಗಳನ್ನು ಹೆಣೆದುಕೊಂಡಿದೆ. ಪ್ಯಾಟ್ ಕಮಿನ್ಸ್ ಸಾರಥ್ಯದ ತಂಡ ಕಪ್ ಗೆದ್ದು ಆಸ್ಟ್ರೇಲಿಯಾಗೆ ತೆಗೆದುಕೊಂಡು ಹೋಗುವ ಭರವಸೆಯಲ್ಲಿದೆ. ಆದರೆ ಇದಕ್ಕೆ ರೋಹಿತ್ ನಾಯಕತ್ವದ ಟೀಮ್ ಸವಾಲೊಡ್ಡಲಿದೆ. ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸವೆಲ್ ಸೇರಿದಂತೆ ಬಲಿಷ್ಠ ಬ್ಯಾಟ್ಸ್ಮನ್ಗಳಿದ್ದಾರೆ. ಅಲ್ಲದೆ ಇದೇ ಟೂರ್ನಿಯಲ್ಲಿ ಮ್ಯಾಕ್ಸವೆಲ್ 201 ರನ್ ಸಿಡಿಸಿದ್ದಾರೆ.
ವರ್ಲ್ಡ್ಕಪ್ ಭಾರತದ ಪ್ಲೇಯಿಂಗ್- 11
ರೋಹಿತ್ ಶರ್ಮಾ (ಕ್ಯಾಪ್ಟನ್), ಕೆ.ಎಲ್.ರಾಹುಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ರವಿಚಂದ್ರನ್ ಅಶ್ವಿನ್, ಶಾರ್ದುಲ್ ಠಾಕೂರ್, ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ
ವರ್ಲ್ಡ್ಕಪ್ ಆಸಿಸ್ ಪ್ಲೇಯಿಂಗ್- 11
ಆಸ್ಟ್ರೇಲಿಯಾ ತಂಡ: ಜೋಶ್ ಇಂಗ್ಲಿಷ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮುನ್ಸ್ (ಕ್ಯಾಪ್ಟನ್) ಡೆವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮರ್ನುಸ್ ಲಬುಸೇನ್, ಗ್ಲೇನ್ ಮ್ಯಾಕ್ಸ್ವೆಲ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹೇಜಲ್ವುಡ್.
ಬೆಂಚ್: ಸಿಯಾನ್ ಅಬ್ಬೋಟ್ಟ್, ಮರ್ಕಸ್ ಸ್ಟೋನಿಸ್, ಅಲೆಕ್ಸ್ ಕ್ಯಾರಿ, ಕೆಮರೋನ್ ಗ್ರೀನ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ