/newsfirstlive-kannada/media/post_attachments/wp-content/uploads/2024/10/IND-vs-AUS.jpg)
ಟೀಮ್ ಇಂಡಿಯಾ, ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಇದಾದ ಬೆನ್ನಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಹುನಿರೀಕ್ಷಿತ ಬಾರ್ಡರ್ ಗವಾಸ್ಕರ್ ಸರಣಿ ಶುರುವಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಭಾರತ ಕ್ರಿಕೆಟ್ ತಂಡ ಆಡಲಿದೆ.
ಇನ್ನು, ಭಾರತ ವಿರುದ್ಧದ ಟೆಸ್ಟ್ ಸರಣಿ ಬೆನ್ನಲ್ಲೇ ಆಸ್ಟ್ರೇಲಿಯಾ ಮತ್ತೊಂದು ಟೆಸ್ಟ್ ಸರಣಿ ಆಡಲಿದೆ. ಈ ಮಹತ್ವದ ಸರಣಿಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದಲ್ಲಿ 2 ಟೆಸ್ಟ್ ಮತ್ತು 1 ಏಕದಿನ ಪಂದ್ಯ ಆಡಲಿದೆ. ಈ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಕೈ ಕೊಟ್ಟ ಪ್ಯಾಟ್ ಕಮಿನ್ಸ್
ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ತಂಡಗಳು ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮೇಲೆ ಕಣ್ಣಿಟ್ಟಿವೆ. ಐಸಿಸಿ ಟೆಸ್ಟ್ ಪಾಯಿಂಟ್ಸ್ ಟೇಬಲ್ನಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದೆ. ಎರಡು ತಂಡಗಳಿಗೂ ಮುಂದಿನ ಎಲ್ಲಾ ಟೆಸ್ಟ್ ಪಂದ್ಯಗಳು ತುಂಬಾ ಇಂಪಾರ್ಟೆಂಟ್ ಆಗಿದೆ. ಈ ಹೊತ್ತಲ್ಲೇ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾ ತಂಡಕ್ಕೆ ಕೈ ಕೊಟ್ಟಿದ್ದಾರೆ.
ಪ್ಯಾಟ್ ಕಮಿನ್ಸ್ ಕೈ ಕೊಟ್ಟಿದ್ಯಾಕೆ?
ಇನ್ನು, ಪ್ಯಾಟ್ ಕಮ್ಮಿನ್ಸ್ ಮತ್ತವರ ಪತ್ನಿ ಬೆಕಿ ಬೋಸ್ಟನ್ ತಮ್ಮ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಇವರು ಮುಂದಿನ ಸೀರೀಸ್ಗಳು ಮಿಸ್ ಮಾಡುವ ಸಾಧ್ಯತೆ ಇದೆ. ಶ್ರೀಲಂಕಾ ಪ್ರವಾಸ್ ಮಿಸ್ ಮಾಡಲಿದ್ದು, ಇವರು ಬಾರ್ಡರ್ ಗವಾಸ್ಕರ್ ಸರಣಿಗೆ ಲಭ್ಯರಾಗೋದು ಡೌಟ್ ಆಗಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಟೆಸ್ಟ್ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್. ಇವರು ತನ್ನ ಗೆಳತಿ ಬೆಕಿ ಬೋಸ್ಟನ್ ಅವರನ್ನೇ ಮದುವೆ ಆಗಿದ್ದಾರೆ. 2022 ರಲ್ಲಿ ಇಬ್ಬರೂ ಮದುವೆಯಾದರು. ಇಬ್ಬರಿಗೂ ಅಲ್ಬಿ ಎಂಬ ಮಗನಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ