/newsfirstlive-kannada/media/post_attachments/wp-content/uploads/2024/06/David-Warner-1.jpg)
ಟಿ20 ವಿಶ್ವಕಪ್‌ನಿಂದಲೇ ಔಟ್ ಆದ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಲೆಜೆಂಡ್ ಕ್ರಿಕೆಟರ್ ಡೇವಿಡ್ ವಾರ್ನರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂದು ಗುಡ್‌ಬೈ ಹೇಳಿದ್ದಾರೆ. ಡೇವಿಡ್ ವಾರ್ನರ್ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಡೇವಿಡ್ ವಾರ್ನರ್ ಅವರು ಸಾರ್ವಕಾಲಿಕ ಶ್ರೇಷ್ಟ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದರು. ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ತಂಡ ಔಟ್ ಆಗುತ್ತಿದ್ದಂತೆ ಡೇವಿಡ್ ವಾರ್ನರ್ ತಮ್ಮ ಕ್ರಿಕೆಟ್ ಜರ್ನಿಗೆ ವಿದಾಯ ಹೇಳಿದ್ದಾರೆ. ಆಸೀಸ್ ತಂಡ ಸೋಲಿನ ಬಳಿಕ ಡೇವಿಡ್ ವಾರ್ನರ್ ನಿವೃತ್ತಿ ಘೋಷಿಸಿರೋದು ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ತಂದಿದೆ. ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್ ಸೇರಿ ಟೀಂ ಇಂಡಿಯಾದ ಹಲವು ಕ್ರಿಕೆಟಿಗರು ಡೇವಿಡ್ ವಾರ್ನರ್ ನಿವೃತ್ತಿ ಘೋಷಣೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ವಿಶ್ವಕಪ್ ಕನಸು ಭಗ್ನ.. ಸೆಮಿಫೈನಲ್ಗೆ ಗ್ರ್ಯಾಂಡ್ ಎಂಟ್ರಿಕೊಟ್ಟ ಅಫ್ಘಾನಿಸ್ತಾನ್..!
ಆಸಿಸ್ ಬಾಹುಬಲಿ!
ಡೇವಿಡ್ ವಾರ್ನರ್ ಅವರು ಆಸ್ಟ್ರೇಲಿಯಾ ತಂಡದಲ್ಲಿ ಬಾಹುಬಲಿ ಎಂದೇ ಖ್ಯಾತಿಗಳಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 383 ಪಂದ್ಯಗಳನ್ನು ಆಡಿದ್ದ ಡೇವಿಡ್ ವಾರ್ನರ್ ಅವರು 18995 ರನ್, 49 ಶತಕ, 98 ಅರ್ಧ ಶತಕವನ್ನು ಸಿಡಿಸಿದ್ದಾರೆ.
ಆಸ್ಟ್ರೇಲಿಯಾ ವಿಶ್ವಕಪ್ ಕನಸು ಭಗ್ನ
ಇಂದು ನಡೆದ ಕೊನೆಯ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅಫ್ಘಾನಿಸ್ತಾನ ರೋಚಕ ಗೆಲುವು ಸಾಧಿಸಿತು. ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸಿದರಿಂದಾಗಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ವಿಶ್ವಕಪ್ ಟೂರ್ನಿಯಿಂದಲೇ ಹೊರಗೆ ಹೋಗಬೇಕಾಯಿತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ