/newsfirstlive-kannada/media/post_attachments/wp-content/uploads/2024/11/ABHISHEK.jpg)
ಅಭಿಷೇಕ್ ಅಂಬರೀಶ್ ಮನೆಯಲ್ಲಿ ಇಂದು ಸಡಗರ ಮನೆ ಮಾಡಿದೆ. ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ. ಅಭಿಷೇಕ್ ಪತ್ನಿ ಅವಿವಾ ಇಂದು 8.30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು. ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಆವಿವಾ ಅಭಿಷೇಕ್ ಸದ್ಯದಲ್ಲಿಯೇ ಹೊಸ ಅತಿಥಿ ಬರಲಿದ್ದಾನೆ ಎಂಬ ಸಿಹಿ ಸುದ್ದಿಯನ್ನು ನೀಡಿದ್ದರು. ಇಂದು ಅವಿವಾ ಗಂಡು ಮಗುವಿಗೆ ಜನ್ಮ ನೀಡಿದ್ದು. ಕನ್ನಡದ ಧೀಮಂತ ನಟ, ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.
ಇದನ್ನೂ ಓದಿ: ಗುಡ್‌ನ್ಯೂಸ್ ಕೊಟ್ಟ ಕೆ.ಎಲ್ ರಾಹುಲ್, ಅಥಿಯಾ ಶೆಟ್ಟಿ ಜೋಡಿ; ಶುಭಾಶಯಗಳ ಮಹಾಪೂರ!
ಅಭಿಷೇಕ್ ಮತ್ತು ಅವಿವಾರ ಮದುವೆಯು ಕಳೆದ ವರ್ಷ ಜೂನ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಬಿದ್ದಪ್ಪ, ಮಾಡೆಲ್ ಹಾಗೂ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಅವಿವಾ ತಂದೆ ಕೂಡ ದೊಡ್ಡ ಬ್ಯುಸಿನೆಸ್ ಮ್ಯಾನ್. ಇದೀಗ ಎರಡೂ ಕುಟುಂಬದಲ್ಲೂ ಸಂಭ್ರಮ ಮನೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us