newsfirstkannada.com

ಅಯೋಧ್ಯೆಯಿಂದ ಬಂತು ಮಂತ್ರಾಕ್ಷತೆ.. ಮನೆ, ಮನೆಗೂ ಹಂಚುವ ಸಿದ್ಧತೆ ಹೇಗಿದೆ?

Share :

Published January 1, 2024 at 9:20pm

Update January 1, 2024 at 9:19pm

    ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ

    ಪ್ರಾಣ ಪ್ರತಿಷ್ಠಾಪನೆಯ ಐತಿಹಾಸಿಕ ದಿನಕ್ಕೆ ರಜೆ ಘೋಷಣೆಗೆ ಒತ್ತಾಯ

    ಉಡುಪಿ ರಥ ಬೀದಿಯಲ್ಲಿರುವ ಕಾಣಿಯೂರು ಮಠದಲ್ಲಿ ವಿಶೇಷ ಪೂಜೆ

ಉಡುಪಿ: ಇದೇ ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಆಗಲಿದೆ. ಈ ಪ್ರಯುಕ್ತ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲಾ ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನ ಆರಂಭಿಸಲಾಗಿದೆ. ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ಪ್ರತಿ ಮನೆಗೆ ವಿತರಿಸಲ್ಪಡುವ ಮಂತ್ರಾಕ್ಷತೆಯನ್ನು ಬಹಳ ಶ್ರದ್ಧಾ ಭಕ್ತಿಯಿಂದ ಕುಟುಂಬದ ಸದಸ್ಯರೊಂದಿಗೆ ಸ್ವೀಕರಿಸಬೇಕು. ಮಂತ್ರಾಕ್ಷತೆಯೊಂದಿಗೆ ಶ್ರೀ ರಾಮ ದೇವರ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ಪತ್ರವನ್ನು ನೀಡಲಾಗುವುದು. ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರು ಕೂಡ ಹಣವನ್ನು ನೀಡುವಂತಿಲ್ಲ. ಯಾವುದೇ ಹಣ ಅಥವಾ ಯಾವುದೇ ವಸ್ತು ರೂಪದಲ್ಲಿ ಏನನ್ನೂ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ ಕಟ್ಟು ಪಾಡು ನಿಯಮಗಳು ಇರುವುದಿಲ್ಲ.

ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ದಿನ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಶಾಸಕರು ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನ. ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು. ಶಾಲಾ ಕಾಲೇಜು, ಸರ್ಕಾರಿ ಸಂಸ್ಥೆ, ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ರಜೆ ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: BIG BREAKING: ಅಯೋಧ್ಯೆಗೆ ಮೈಸೂರಿನ ಶಿಲ್ಪಿ ಕೆತ್ತನೆಯ ರಾಮ ಲಲ್ಲಾ ಮೂರ್ತಿ ಆಯ್ಕೆ

ಇದರ ಜೊತೆಗೆ ಜನವರಿ 22ರಂದು ದೇವಸ್ಥಾನ ಮಠ ಮಂದಿರಗಳಲ್ಲಿ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. 22ರ ನಂತರ ಅಯೋಧ್ಯೆಗೆ ಬಂದು ದರ್ಶನ ಪಡೆಯುವಂತೆ ಆಹ್ವಾನ ನೀಡಲಾಗಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠೆ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೂಜೆ ಹವನ ಸತ್ಸಂಗ ಭಜನೆ ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ ಕೇಂದ್ರಗಳಲ್ಲಿ ನಡೆಯಲಿದೆ. ಆ ದಿನ ಸಂಜೆ ವೇಳೆ ಪ್ರತಿ ಮನೆಯಲ್ಲಿ ಕನಿಷ್ಠ 5 ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಉತ್ತರದ ಕಡೆಗೆ ಮುಖ ಮಾಡಿ ಆರತಿ ಮಾಡಬೇಕು. ಈ ಮೂಲಕ ಆ ದಿನವನ್ನು ಸಂಭ್ರಮಿಸಬೇಕೆಂದು ಟ್ರಸ್ಟ್ ಕರೆ ನೀಡಿದೆ ಎಂದು ವಿಎಚ್​ಪಿ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಯೋಧ್ಯೆಯಿಂದ ಬಂತು ಮಂತ್ರಾಕ್ಷತೆ.. ಮನೆ, ಮನೆಗೂ ಹಂಚುವ ಸಿದ್ಧತೆ ಹೇಗಿದೆ?

https://newsfirstlive.com/wp-content/uploads/2024/01/rama-5.jpg

Load More