/newsfirstlive-kannada/media/post_attachments/wp-content/uploads/2025/03/Subbayya-Shetty.jpg)
ಮಂಗಳೂರು: ಇಂದು ಸೋಮವಾರ ಮಾಜಿ ಸಚಿವ ಬಿ. ಸುಬ್ಬಯ್ಯ ಶೆಟ್ಟಿ(91) ನಿಧನರಾಗಿದ್ದಾರೆ. ಬೆಂಗಳೂರಿನ ಸ್ವಗೃಹದಲ್ಲೇ ಬಿ. ಸುಬ್ಬಯ್ಯ ಶೆಟ್ಟಿ ಕೊನೆಯುಸಿರೆಳೆದಿದ್ದಾರೆ.
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಕ್ರಬೈಲುನವರು. ಸುಬ್ಬಯ್ಯ ಅವರು ಕಾಂಗ್ರೆಸ್ಸಿನಿಂದ ಎರಡು ಬಾರಿ ಸುರತ್ಕಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಳಿಕ ಭೂ ಸುಧಾರಣಾ ಸಚಿವರಾಗಿ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಬಿ. ಸುಬ್ಬಯ್ಯ ಶೆಟ್ಟಿ ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದರು. ನಂತರ ಸಿಬಿಐ ಹುದ್ದೆಗೆ ನೇಮಕಗೊಂಡು ಕಾಶ್ಮೀರ ಮತ್ತು ಲಡಾಖ್​​ನಲ್ಲಿ ಸೇವೆಯನ್ನು ಸಲ್ಲಿಸಿದ್ದರು.
ಇದನ್ನೂ ಓದಿ: iPhone Vs Android: ವಿಶ್ವದ ಶ್ರೀಮಂತ CEOಗಳು ಬಳಸೋ ಸ್ಮಾರ್ಟ್​ಫೋನ್​ ಯಾವುದು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us