newsfirstkannada.com

ಬಿಜೆಪಿಗೆ ಲಾಟರಿ ಅಧ್ಯಕ್ಷ.. ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಬಿ.ವೈ ವಿಜಯೇಂದ್ರ ಖಡಕ್ ಸವಾಲು; ಏನಂದ್ರು?

Share :

Published February 5, 2024 at 12:32pm

    ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿ.ವೈ ವಿಜಯೇಂದ್ರ ಕೌಂಟರ್

    ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗುತ್ತೆ

    ಜಾನುವಾರುಗಳ ಕೋಪಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ಬಲಿಯಾಗಿದೆ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಡುವಿನ ವಾಕ್ಸಮರ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಲಾಟರಿ ಹೊಡೆದಿದೆ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ವಿಜಯೇಂದ್ರ ಅವರು ಗರಂ ಆಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಲಾಟರಿನಾ, ಬಂಪರ್ ಲಾಟರಿನಾ ಅಂತ ನಮ್ಮ ಕಾರ್ಯಕರ್ತರು ತೋರಿಸುತ್ತಾರೆ. ಎಲೆಕ್ಷನ್‌ನಲ್ಲಿ ಲಾಟರಿ ಯಾರಿಗೆ ಅನ್ನೋದನ್ನ ರಾಜ್ಯದ ಜನ ಡಿಸೈಡ್ ಮಾಡುತ್ತಾರೆ ಎಂದು ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಸವಾಲು ಹಾಕಿರುವ ಬಿ.ವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ರಾಜ್ಯ ಸರ್ಕಾರ ಬಲಿಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ರು. ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರ್ಕಾರ 716 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ಪರಿಣಾಮ 10 ಲಕ್ಷ ಲೀಟರ್ ಹಾಲು ಸಂಗ್ರಹಣೆ ಕಡಿಮೆ ಆಗಿದೆ.

ಇದನ್ನೂ ಓದಿ: ‘ಇಲ್ಲಿಯವರೆಗೂ ದೆಹಲಿಯಲ್ಲಿ ಪ್ರತಿಭಟನೆ ಮಾಡಿರಲಿಲ್ಲ, ಆದರೆ..’ ಜಂಟಿ ಸುದ್ದಿಗೋಷ್ಟಿಯಲ್ಲಿ ಸಿದ್ದು, ಡಿಕೆಶಿ ವಾಗ್ದಾಳಿ

ಕಾಂಗ್ರೆಸ್ ನಾಯಕರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಾರೆ. ಮಾನ ಮಾರ್ಯಾದೆ ಇದೆಯಾ ಅಂತಾರೆ. ನಾನು ಆ ಭಾಷೆ ಬಳಕೆ ಮಾಡುವುದಿಲ್ಲ. ಈ ಸರ್ಕಾರ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಈ ಸರ್ಕಾರ ರೈತರ ಪ್ರೋತ್ಸಾಹ ಧನ ಉಳಿಸಿಕೊಂಡ ಪಾಪದ ಸರ್ಕಾರ ಅಂತಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಾರೆ ಎಂದು ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿಗೆ ಲಾಟರಿ ಅಧ್ಯಕ್ಷ.. ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಬಿ.ವೈ ವಿಜಯೇಂದ್ರ ಖಡಕ್ ಸವಾಲು; ಏನಂದ್ರು?

https://newsfirstlive.com/wp-content/uploads/2024/02/BY-Vijayendra-On-Dk-shivakumar.jpg

Load More