ಹೈಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಗೌರವಿಸಬೇಕು
ಆರೋಪ ಬಂದ ಮೇಲೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು
ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯ
ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿಯಲಾಗಿದೆ. ಹೈಕೋರ್ಟ್ ಈ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆ.. ಏನಿದು ಮುಡಾ ಹಗರಣ..?
ಹೈಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೈಸೂರಿನ ಮುಡಾ ಹಗರಣದಲ್ಲಿ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳು ಆಗಿದ್ದಾರೆ. ನಮ್ಮ ಮೈಸೂರು ಚಲೋ ಪಾದಯಾತ್ರೆ ಒಂದು ಕಡೆಯಾದ್ರೆ ಖಾಸಗಿ ವ್ಯಕ್ತಿಗಳು ಸೂಕ್ತ ತನಿಖೆಗೆ ದೂರು ನೀಡಿದ್ದರು. ಎಲ್ಲವನ್ನೂ ಆಧಾರವಾಗಿ ಇಟ್ಟುಕೊಂಡು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಸುದೀರ್ಘವಾಗಿ ಪರ ವಿರೋಧ ವಾದ ನಡೆದ ಬಳಿಕ ಹೈಕೋರ್ಟ್ ಸಿದ್ದರಾಮಯ್ಯ ಅವರ ಅರ್ಜಿ ವಜಾ ಮಾಡಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಮುಂದುವರೆದು ಮಾತನಾಡಿರುವ ವಿಜಯೇಂದ್ರ ಅವರು ನ್ಯಾಯಾಧೀಶರು ತಮ್ಮ ತೀರ್ಪುನಲ್ಲಿ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಹೇಳಿದ್ದಾರೆ. ಹೈಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಗೌರವಿಸಬೇಕು. ಆರೋಪ ಬಂದ ಮೇಲೆ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಮುಂದಿರುವ ದಾರಿಯೇನು?
ಹೈಕೋರ್ಟ್ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಗವರ್ನರ್ ಪ್ರಾಸಿಕ್ಯೂಷನ್ ನಿರ್ಧಾರವನ್ನು ಎತ್ತಿ ಹಿಡಿದಿದಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ; ತೀರ್ಪು ವೇಳೆ ಹೈಕೋರ್ಟ್ ಹೇಳಿದ್ದೇನು..?
ಹೈಕೋರ್ಟ್ ಈ ತೀರ್ಪಿನಿಂದ ಮುಡಾ ಕೇಸ್‌ನ ದೂರಿನ ಹಿನ್ನೆಲೆಯಲ್ಲಿ ಅಧೀನ ನ್ಯಾಯಾಲಯಕ್ಕೆ ನೀಡಿದ್ದ ತಡೆಯಾಜ್ಞೆಯನ್ನೂ ತೆರವುಗೊಳಿಸಲಾಗಿದೆ. ಇದೀಗ ಅಧೀನ ನ್ಯಾಯಾಲಯ ಪ್ರಾಸಿಕ್ಯೂಷನ್‌ಗೆ ತೀರ್ಪು ನೀಡುವುದಕ್ಕೆ ಅವಕಾಶ ಇದೆ.
ಅಧೀನ ನ್ಯಾಯಾಲಯ ಮುಡಾ ಹಗರಣದ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಲಿದೆ. ಕಾನೂನಿನ ಪ್ರಕಾರ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ. ತನಿಖೆ ನಡೆದು ಶಿಕ್ಷೆಯಾದಲ್ಲಿ ಮಾತ್ರ ರಾಜೀನಾಮೆ ಕೊಡಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ