newsfirstkannada.com

ಪಟ್ಟಾಭಿಷೇಕ ಆಗ್ತಿದ್ದಂತೆ ಅಖಾಡಕ್ಕಿಳಿದ ಬಿ.ವೈ ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರ ಪ್ಲಾನ್ ಏನು?

Share :

11-11-2023

    ಇಂದಿನಿಂದಲೇ ಅಧಿಕೃತವಾಗಿ ಪಕ್ಷ ಸಂಘಟನೆಗೆ ಅಣಿಯಾದ ವಿಜಯೇಂದ್ರ

    ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಂಚಲನ ಸೃಷ್ಟಿಸಲು ಬಿವೈವಿ ರಣತಂತ್ರ

    ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಭದ್ರ ಪಡಿಸುವ ಹೊಣೆಗಾರಿಕೆ

ಬೆಂಗಳೂರು: ಬಿ.ವೈ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಬಿಜೆಪಿ ಹೈಕಮಾಂಡ್ ಬಿ.ಎಸ್‌ ಯಡಿಯೂರಪ್ಪ ಪುತ್ರನಿಗೆ ಮಹತ್ವದ ಜವಾಬ್ದಾರಿ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಭದ್ರ ಪಡಿಸುವ ಹೊಣೆ ವಿಜಯೇಂದ್ರ ಅವರ ಹೆಗಲೇರಿದೆ.

ರಾಜ್ಯ ಬಿಜೆಪಿ ಘಟಕಕ್ಕೆ ಬಿ.ವೈ ವಿಜಯೇಂದ್ರ ಆಯ್ಕೆಯಾದ ಹಿನ್ನೆಲೆಯಲ್ಲಿ ನೂತನ ರಾಜ್ಯಾಧ್ಯಕ್ಷರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ವಿಜಯೇಂದ್ರ ಅವರ ಅಭಿಮಾನಿಗಳು ಸಂಭ್ರಮ ಆಚರಣೆಯಲ್ಲಿದ್ದಾರೆ. ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರಕ್ಕೇರಿರುವ ವಿಜಯೇಂದ್ರ ಅವರು ಇಂದಿನಿಂದಲೇ ಅಧಿಕೃತವಾಗಿ ಪಕ್ಷ ಸಂಘಟನೆಗೆ ಅಣಿಯಾಗಿದ್ದಾರೆ. ಬಿವೈವಿ ಅವರು ಇಂದು ಬೆಳಗ್ಗೆ 8:30ಕ್ಕೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡುವ ಮೂಲಕ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಲಿದ್ದಾರೆ.

ಬಿ.ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗಾಂಧಿನಗರ ವಾರ್ಡ್‌ನ ಬೂತ್ ನಂಬರ್ 23 ರ ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಬೂತ್ ಅಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿ, ತಮ್ಮ ಮೊದಲ ದಿನವನ್ನು ಆರಂಭಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಟ್ಟಾಭಿಷೇಕ ಆಗ್ತಿದ್ದಂತೆ ಅಖಾಡಕ್ಕಿಳಿದ ಬಿ.ವೈ ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರ ಪ್ಲಾನ್ ಏನು?

https://newsfirstlive.com/wp-content/uploads/2023/11/By-Vijayendra-1.jpg

Load More