newsfirstkannada.com

BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ; ನಳಿನ್ ಕುಮಾರ್ ಕಟೀಲ್ ಹಸ್ತಾಂತರ

Share :

15-11-2023

    ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ

    ರಾಜ್ಯ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿ ಸಂಭ್ರಮದ ಪದಗ್ರಹಣ

    ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರ ಪದಗ್ರಹಣವಾಗಿದೆ. ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದ್ದಾರೆ.

ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಅಧಿಕಾರ ಹಸ್ತಾಂತರಿಸಿದ ವಿಜಯೇಂದ್ರರನ್ನು ಸನ್ಮಾನಿಸಿದ ನಳಿನ್ ಕುಮಾರ್ ಕಟೀಲ್ ಅವರು ಅಪ್ಪಿಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ವಿಜಯೇಂದ್ರ ಅವರ ಪದಗ್ರಹಣದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಗೆ ಘಟಾನುಘಟಿ ನಾಯಕರ ದಂಡೇ ಹರಿದು ಬಂದಿದೆ. ಎಲ್ಲಾ ನಾಯಕರು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ; ನಳಿನ್ ಕುಮಾರ್ ಕಟೀಲ್ ಹಸ್ತಾಂತರ

https://newsfirstlive.com/wp-content/uploads/2023/11/By-Vijayendra-10.jpg

Load More