/newsfirstlive-kannada/media/post_attachments/wp-content/uploads/2024/06/dbos.jpg)
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ವಶದಲ್ಲಿದೆ. ಸದ್ಯ ದಿನ ಕಳೆದಂತೆ ಈ ಕೊಲೆ ಕೇಸ್ನಲ್ಲಿ ಪೊಲೀಸ್ ಅಧಿಕಾರಿಗಳು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಇದೇ ಕೇಸ್ ಸಂಬಂಧ ಈಗಾಗಲೇ ಮೋಹಕ ತಾರೆ ರಮ್ಯಾ, ಕಿಚ್ಚ ಸುದೀಪ್, ನಟ ಉಪೇಂದ್ರ ಸೇರಿದಂತೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಮೆಗ್ಗರ್ ರಾಜುನ ಕ್ರೌರ್ಯದ ಇತಿಹಾಸ ತುಂಬಾನೇ ಭಯಾನಕ.. ಚಿತ್ರಹಿಂಸೆ ಅನುಭವಿಸಿದ್ದು ರೇಣುಕಾಸ್ವಾಮಿ ಒಬ್ಬರೇ ಅಲ್ಲ..!
ನಟ ದರ್ಶನ್ ಜೊತೆಗೆ ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ನಿಕಟ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಆದರೆ ನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಜಮೀರ್ ಅಹಮದ್ ಖಾನ್ ಅವರು ತುಂಬಾ ಸೈಲೆಂಟ್ ಆಗಿಬಿಟ್ಟಿದ್ದಾರೆ. ಈ ಹಿಂದೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜಮೀರ್ ಅಹಮದ್ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದರು.
View this post on Instagram
ಆದರೆ ಇದೀಗ ಸಚಿವ ಜಮೀರ್ ಅಹಮದ್ ಖಾನ್ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ರೀಲ್ಸ್ನಲ್ಲಿ ಜಮೀರ್ ಅಹಮದ್ ಅವರು ತಮ್ಮ ಮನೆಯ ಸಾಕು ಪ್ರಾಣಿ ಬೆಕ್ಕಿಗೆ ಆಹಾರ ನೀಡುತ್ತಿದ್ದಾರೆ. ಇದೇ ವಿಡಿಯೋಗೆ ನಟ ದರ್ಶನ್ ನಟನೆಯ ಲಾಲಿ ಹಾಡು ಸಿನಿಮಾದ ಸ್ನೇಹ ಎಂಬ ತಂಗಾಳಿಗೆ ಯಾವ ರೂಪ ಇಲ್ಲ ಎಂಬ ಚರಣವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಇನ್ನು ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ದಯಮಾಡಿ ನಮ್ಮ ಡಿ ಬಾಸ್ ಸಹಾಯ ಮಾಡಿ ಅಂತ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ