/newsfirstlive-kannada/media/post_attachments/wp-content/uploads/2024/05/MAXWELL-4.jpg)
ಇಂದು ಅಹಮದಾಬಾದಿನ ನರೇಂದ್ರ ಮೋದಿ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಂನಲ್ಲಿ 2025ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 5ನೇ ಪಂದ್ಯ ನಡೆಯುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿ ಆಗಲಿವೆ. ಇದರ ಮಧ್ಯೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ಸ್ಟಾರ್​ ಆಲ್​ರೌಂಡರ್​​ ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಬಿಗ್​ ಶಾಕ್​ ಕಾದಿದೆ.
ದುಬೈನಲ್ಲಿ ನಡೆದಿದ್ದ ಇಂಡಿಯನ್​ ಪ್ರೀಮಿಯರ್​ ಲೀಗ್​ ಮೆಗಾ ಹರಾಜಿನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್​ ಅವರು ಪಂಜಾಬ್​ ತಂಡದ ಪಾಲಾಗಿದ್ದರು. ಪಂಜಾಬ್​ ಕಿಂಗ್ಸ್​, ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​ ಮಧ್ಯೆ ಮ್ಯಾಕ್ಸಿ ಖರೀದಿಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಪಂಜಾಬ್​ ಕಿಂಗ್ಸ್​ 4.20 ಕೋಟಿ ನೀಡಿ ಮ್ಯಾಕ್ಸಿ ಅವರನ್ನು ಖರೀದಿಸಿತ್ತು.
ಮ್ಯಾಕ್ಸಿಗೆ ಚಾನ್ಸ್​ ಡೌಟ್​​
ಇಂದು ನಡೆಯಲಿರೋ ಪಂದ್ಯದಲ್ಲಿ ಮ್ಯಾಕ್ಸ್​ವೆಲ್​ಗೆ ಪ್ಲೇಯಿಂಗ್​ ಎಲೆವೆನ್​ನಲ್ಲಿ ಚಾನ್ಸ್​ ಸಿಗೋದು ಡೌಟ್​​. ಕಾರಣ ಇವರು ಕಳೆದ ಐಪಿಎಲ್​ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು.
2021ರ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಅವರನ್ನು 14.25 ಕೋಟಿ ರೂಪಾಯಿ ನೀಡಿ ಆರ್​​ಸಿಬಿ ಖರೀದಿ ಮಾಡಿತ್ತು. 2023ರ ಐಪಿಎಲ್‌ನಲ್ಲಿ 400 ರನ್ ಗಳಿಸಿದ್ದ ಮ್ಯಾಕ್ಸಿ ಕಳೆದ ಸೀಸನ್​ 2024ರ ಐಪಿಎಲ್‌ನಲ್ಲಿ ಕೇವಲ 52 ರನ್​ ಗಳಸಿದರು. ಈ ಮೂಲಕ ಆರ್​ಸಿಬಿಗೆ ಮ್ಯಾಕ್ಸ್​ವೆಲ್​ ದೊಡ್ಡ ತಲೆನೋವಾಗಿ ಪರಿಣಮಿಸಿದ್ರು.
2021ರಿಂದ 2023ರವರೆಗೆ ಆರ್​ಸಿಬಿ ಪರ ಮ್ಯಾಕ್ಸಿ ಅದ್ಭುತ ಆಲ್​ರೌಂಡರ್ ಆಟವನ್ನಾಡಿದ್ದರು. 2021ರಲ್ಲಿ ಮ್ಯಾಕ್ಸ್​​ವೆಲ್ 513, 2022ರಲ್ಲಿ 301, 2023ರಕ್ಕು 400 ರನ್​​ ಬಾರಿಸಿದ್ದರು. 2024ರಲ್ಲಿ ಕೇವಲ 52 ರನ್​​ ಮಾತ್ರ ಬಾರಿಸಿದ್ದರು. ಆಡಿದ 10 ಪಂದ್ಯಗಳಲ್ಲೂ ಮ್ಯಾಕ್ಸ್​ವೆಲ್ ಕೆಟ್ಟ ಪ್ರದರ್ಶನ ನೀಡಿ ಆರ್​ಸಿಬಿ ಮ್ಯಾನೇಜ್ಮೆಂಟ್​​ ಕೆಂಗಣ್ಣಿಗೆ ಗುರಿಯಾಗಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us