ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸಿಎಂ ತರಾಟೆ
ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದ್ಯಾರು?
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆ ನಡೀತು. ಈ ಸಭೆ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEPಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು.
ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.
NEPಗೆ ಏಕಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಾದ್ಯಂತ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
‘ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ನೀತಿ’
2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಕರ್ನಾಟಕದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ