newsfirstkannada.com

ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್; ವಶಕ್ಕೆ ಪಡೆದ ಸಿಸಿಬಿಯಿಂದ ಗೂಂಡಾ ಕೇಸ್‌ ದಾಖಲು

Share :

12-08-2023

    ಇದುವರೆಗೂ ಪುನೀತ್ ಮೇಲೆ ದಾಖಲಾದ ಕೇಸ್ ಎಷ್ಟು?

    ಮೇಲಿಂದ ಮೇಲೆ ಕ್ರಿಮಿನಲ್ ಕೇಸ್‌ಗಳು ದಾಖಲಾದ ಹಿನ್ನೆಲೆ

    ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಮೇಲಿಂದ ಮೇಲೆ ಕ್ರಿಮಿನಲ್ ಕೇಸ್‌ಗಳು ದಾಖಲಾದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರ ವಿರುದ್ಧ ರೌಡಿಶೀಟರ್ ಓಪನ್ ಆಗಿದೆ. ಚಾಮರಾಜಪೇಟೆ ಠಾಣೆ ಪೊಲೀಸರು ಪುನೀತ್ ಕೆರೆಹಳ್ಳಿ ಅವರನ್ನು ರೌಡಿ ಪಟ್ಟಿಗೆ ಸೇರಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು, ಗೂಂಡಾ ಕಾಯ್ದೆಯಡಿ ಪ್ರಕರಣವನ್ನೂ ದಾಖಲು ಮಾಡಿದ್ದಾರೆ. ಇದುವರೆಗೂ ಪುನೀತ್ ಕೆರೆಹಳ್ಳಿ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸಮಾಜದಲ್ಲಿ ಶಾಂತಿ ‌ಕದಡುವ ಯತ್ನ ಹಾಗೂ ಹಲವು ಗಂಭೀರ ಆರೋಪಗಳ ಇವರ ಮೇಲಿವೆ. 2013ರಿಂದ 2023ರವರಗೆ ಮೇಲಿಂದ‌ ಮೇಲೆ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಅವರ ಮೇಲಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ಮಾರ್ಚ್‌ ತಿಂಗಳಲ್ಲಿ ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆಯಲಾಗಿತ್ತು. ಈ ವೇಳೆ ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಅನ್ನೋ ಆರೋಪ ಪುನೀತ್ ಕೆರೆಹಳ್ಳಿ ಅವರ ಮೇಲಿತ್ತು. ಈ ಘಟನೆ ನಡೆದ ಮರುದಿನ ಜಾನುವಾರು ಸಾಗಣೆ ವಾಹನದಲ್ಲಿದ್ದ ಇದ್ರೀಷ್ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್ ಹಾಗೂ ಅವರ ಗೆಳೆಯರು ಇದ್ರೀಷ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡ ರಾಮನಗರ ಪೊಲೀಸರು ಪುನೀತ್ ಕೆರೆಹಳ್ಳಿ ಹಾಗೂ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಬಂಧಿಸಿ ಕರೆ ತಂದಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್; ವಶಕ್ಕೆ ಪಡೆದ ಸಿಸಿಬಿಯಿಂದ ಗೂಂಡಾ ಕೇಸ್‌ ದಾಖಲು

https://newsfirstlive.com/wp-content/uploads/2023/08/Puneeth-Kerehalli.jpg

Load More