/newsfirstlive-kannada/media/post_attachments/wp-content/uploads/2025/04/Darshan-Devil-film-Shooting-1.jpg)
ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಜಾಮೀನು ಪಡೆದು ರಿಲೀಸ್ ಆಗಿರುವ ನಟ ದರ್ಶನ್‌ಗೆ ಕೊನೆಗೂ ಕೋರ್ಟ್ ಗುಡ್‌ನ್ಯೂಸ್ ಕೊಟ್ಟಿದೆ. ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಡೆವಿಲ್ ಶೂಟಿಂಗ್‌ಗೆ ವಿದೇಶಕ್ಕೆ ತೆರಳಲು ಗ್ರೀನ್‌ಸಿಗ್ನಲ್ ಸಿಕ್ಕಿದೆ.
ಶೂಟಿಂಗ್‌ಗಾಗಿ ವಿದೇಶಕ್ಕೆ ಹೋಗಲು ಅನುಮತಿ ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. 64ನೇ CCH ಕೋರ್ಟ್‌ನ ನ್ಯಾ. ಐ.ಪಿ ನಾಯ್ಕ್ ಅವರು ದರ್ಶನ್‌ಗೆ ಅನುಮತಿ ನೀಡಿ ಆದೇಶಿಸಿದ್ದಾರೆ.
ಇದನ್ನೂ ಓದಿ: ‘ನಾನು ದರ್ಶನ್ ಅಭಿಮಾನಿ.. ರಕ್ತ ಕುದಿತಿದೆ’.. ಚಾರು ಖ್ಯಾತಿಯ ಮೌನ ಗುಡ್ಡೆಮನೆ ಕೆಂಡ
ಡೆವಿಲ್ ಸಿನಿಮಾ ಚಿತ್ರೀಕರಣದ ಹಿನ್ನೆಲೆಯಲ್ಲಿ ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ CRPC ಸೆಕ್ಷನ್ 439(1) (b) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಒಟ್ಟು 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಲಾಗಿದೆ. ಜೂನ್ 1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಶೂಟಿಂಗ್‌ಗಾಗಿ ದುಬೈ ಹಾಗೂ ಯುರೋಪ್‌ಗೆ ತೆರಳಲು ಕೋರ್ಟ್ ಅವಕಾಶ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ