newsfirstkannada.com

ಮೆರಿಟ್‌ನಲ್ಲಿ ಎಂಜಿನಿಯರಿಂಗ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾರಣವೇನು?

Share :

Published May 17, 2024 at 1:31pm

Update May 17, 2024 at 1:41pm

    ಎಂಜಿನಿಯರಿಂಗ್ ಓದಲು ಮೆರೀಟ್‌ನಲ್ಲಿ ಸೀಟ್‌ ಗಳಿಸಿದ್ದ ಹರ್ಷಿತ ಸಾವು

    ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜು

    ಆಡಳಿತ ಮಂಡಳಿಯ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪ

ಬೆಂಗಳೂರು ನಗರದಲ್ಲಿ ಕಳೆದ 8 ತಿಂಗಳ ಅಂತರ‌ದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪ್ರತಿಷ್ಠಿತ PES ಕಾಲೇಜಿನಲ್ಲಿ BE ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಚಂದಾಪುರ ಸಮೀಪದಲ್ಲಿರುವ ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ದುರ್ಘಟನೆ ನಡೆದಿದೆ. ಎಂಜಿನಿಯರಿಂಗ್ ಓದುತ್ತಿದ್ದ 18 ವರ್ಷದ ವಿದ್ಯಾರ್ಥಿನಿ ಹರ್ಷಿತ ತನ್ನ ಕಾಲೇಜಿನ ಹಾಸ್ಟೆಲ್​ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರು PES ಕಾಲೇಜಿನಲ್ಲಿ ಮತ್ತೊಂದು ದುರಂತ.. BE ವಿದ್ಯಾರ್ಥಿ ಆತ್ಮಹತ್ಯೆ? ಕಾರಣವೇನು? 

ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತಾ ಅವರ ಶವ ನಿನ್ನೆ ರಾತ್ರಿ ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹರ್ಷಿತಾ ಸಾವಿಗೆ ಕಾಲೇಜು ವಿದ್ಯಾರ್ಥಿನಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆಡಳಿತ ಮಂಡಳಿಯ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ಕಾಲೇಜು ಆವರಣದಲ್ಲಿ ಹರ್ಷಿತ ಸಾವು ಖಂಡಿಸಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನವರ ಕಿರುಕುಳಕ್ಕೆ ವಿದ್ಯಾರ್ಥಿನಿ ಬೇಸತ್ತು ಆತ್ಮಹತ್ಯೆ ಮಾಡಿದ್ದಾರೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದ ಕಾಲೇಜಿಗೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹರ್ಷಿತ ಪಿಯುಸಿ ಹಾಗೂ CET ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಮೆರಿಟ್‌ನಲ್ಲಿ ಎಂಜಿನಿಯರಿಂಗ್ ಸೀಟ್ ಪಡೆದಿದ್ದಳು. ಹಾಸನ ಮೂಲದ ಹರ್ಷಿತಾ ಮೆರೀಟ್ ಸೀಟ್‌ನಲ್ಲಿ ಎಂಜಿನಿಯರಿಂಗ್ ಸೀಟ್ ಪಡೆದಿದ್ದಳು. ನಿನ್ನೆ ಸಂಜೆ ಸಹೋದರನ ಫೋನ್‌ಗೆ ಕರೆ ಮಾಡಿ ಎಂದಿನಂತೆ ಕುಟುಂಬಸ್ಥರ ಜೊತೆ ಮಾತಾಡಿದ್ದಾಳೆ. ನಂತರ ಹಾಸ್ಟೆಲ್‌ನಲ್ಲಿ ನಡೆದ ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯಲ್ಲಿ ಭಾಗಿಯಾಗಿ ಕೇಕ್ ಕಟ್ ಮಾಡಿದ್ದಾರೆ. ರಾತ್ರಿ 10:30 ರ ಸುಮಾರಿಗೆ ತನ್ನ ಹಾಸ್ಟೆಲ್ ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ 11:30 ರ ಸುಮಾರಿಗೆ ಹರ್ಷಿತಾ ಕುಟುಂಬಸ್ಥರಿಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮೃತ ಹರ್ಷಿತ ಮೊಬೈಲ್ ಸೀಜ್ ಮಾಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೆರಿಟ್‌ನಲ್ಲಿ ಎಂಜಿನಿಯರಿಂಗ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾರಣವೇನು?

https://newsfirstlive.com/wp-content/uploads/2024/05/Bangalore-Student-Death-3.jpg

Load More