newsfirstkannada.com

ಹೆಚ್‌.ಡಿ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌; ಮಾಜಿ ಸಿಎಂ ಸುದ್ದಿಗೋಷ್ಠಿ ಮೇಲೆ ಭಾರೀ ನಿರೀಕ್ಷೆ

Share :

03-09-2023

    ವೈದ್ಯ ಡಾ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿತ್ತು

    ತಡರಾತ್ರಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ರು

    ಮಾಜಿ ಸಿಎಂರನ್ನು ಸ್ವಾಗತಿಸಲು JDS ಕಾರ್ಯಕರ್ತರಿಂದ ಸಿದ್ಧತೆ​

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಕಳೆದ ನಾಲ್ಕು ದಿನಗಳ ಹಿಂದೆ ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎನ್ನಲಾಗಿದೆ.

ಹೆಚ್​.ಡಿ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆಗಸ್ಟ್​ 30 ರಂದು ತಡರಾತ್ರಿ ಜಯನಗರದಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆಸ್ಪತ್ರೆಯ ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದರು. ಹೀಗಾಗಿ ಕಳೆದ 4 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿಯವರು ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ. ಇನ್ನು ಡಿಸ್ಚಾರ್ಜ್ ಆಗುತ್ತಿದ್ದಂತೆ ಹೆಚ್​ಡಿಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ತಮ್ಮ ಅನಾರೋಗ್ಯದ ಊಹಾಪೋಹಗಳಿಗೆ ಖುದ್ದು ಹೆಚ್‌ಡಿಕೆ ಅವರೇ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಅಲ್ಲದೇ ಕುಮಾರಸ್ವಾಮಿ ಡಿಸ್ಚಾರ್ಜ್​ ಆಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್​ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು ತಮ್ಮ ನಾಯಕನನ್ನು ಸ್ವಾಗತಿಸಲು ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್​.ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ತಡರಾತ್ರಿ ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯ ಸತೀಶ್ ಚಂದ್ರ ನೇತೃತ್ವದ ತಂಡ ಚಿಕಿತ್ಸೆ ನೀಡಿತ್ತು. ಅಂದು ಬೆಳಗ್ಗೆ ಮಾಧ್ಯಮದ ಮುಂದೆ ಮಾತನಾಡಿದ ವೈದ್ಯರು, ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದ್ದು, ಸಣ್ಣ ಸ್ಟ್ರೋಕ್ ಆಗಿತ್ತು. ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದು ಬೆಡ್​ ಮೇಲೆ ಕುಳಿತು ಮಾತನಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಹೆಚ್.ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು ಆಗುತ್ತಿದ್ದಂತೆ ವಿವಿಧ ರಾಜಕೀಯ ಗಣ್ಯರು ಸೇರಿದಂತೆ ಹಲವಾರು ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು. ವಿದೇಶದಲ್ಲಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಆಗಮಿಸಿ ಆಸ್ಪತ್ರೆಗೆ ತೆರಳಿದ್ದರು. ಸಿಎಂ ಸಿದ್ದರಾಮಯ್ಯ ಅವರು ಖುದ್ದು ಅಪೋಲೋ ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿಯ ಆರೋಗ್ಯ ವಿಚಾರಣೆ ಮಾಡಿದ್ದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಡಿಸಿಎಂ ಡಿ.ಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ಸಿ.ಪಿ ಯೋಗೀಶ್ವರ್, MLC ಶರವಣ, ಜೆಡಿಎಸ್​ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವಾರು ಗಣ್ಯರು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಚ್‌.ಡಿ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌; ಮಾಜಿ ಸಿಎಂ ಸುದ್ದಿಗೋಷ್ಠಿ ಮೇಲೆ ಭಾರೀ ನಿರೀಕ್ಷೆ

https://newsfirstlive.com/wp-content/uploads/2023/08/HDK-4.jpg

Load More