ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಸೂರ್ಯ
ದೇವೇಗೌಡರ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚೆ
ಹಿರಿಯ ರಾಜಕಾರಣಿಯ ಆಶೀರ್ವಾದ ಪಡೆದ ಸಂಸದ
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹಿರಿಯ ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಇಂದು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಕೆಲವೊತ್ತು ಆಡಳಿತ, ದೇಶದ ಪ್ರಗತಿ ಹಾಗೂ ರಾಜಕೀಯ ಚರ್ಚೆ ನಡೆಸಿದರು. ಬಳಿಕ ದೊಡ್ಡಗೌಡರ ಆರೋಗ್ಯ ಬಗ್ಗೆ ಕೇಳಿ ತಿಳಿದುಕೊಂಡರು. ಇನ್ನು ಹೆಚ್.ಡಿ ದೇವೇಗೌಡರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು.
ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ತಿಂಗಳು ಇಡೀ ಬಿಜೆಪಿ ವತಿಯಿಂದ ಮಹಾ ಸಂಕಲ್ಪ ಅಭಿಯಾನ ಕೈಗೊಳ್ಳಲಾಗಿದೆ. ಹೀಗಾಗಿ ಈ ಅಭಿಯಾನದಡಿ ತೇಜಸ್ವಿ ಸೂರ್ಯ, ದೇವೇಗೌಡರನ್ನು ಭೇಟಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ