/newsfirstlive-kannada/media/post_attachments/wp-content/uploads/2023/11/BNG_RAIN-3.jpg)
ಬೆಂಗಳೂರು: ಈಶಾನ್ಯ ಮಾನ್ಸೂನ್ ಅಬ್ಬರ ಜೋರಾಗಿರುವ ಕಾರಣ ಈ ಬಿಸಿ ಸಿಲಿಕಾನ್​ ಸಿಟಿಗೂ ತಟ್ಟಿದ್ದು ಕೆಲವೆಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಇನ್ನು 2-3 ದಿನ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ನಿನ್ನೆ ಸುರಿದ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಸಂಪೂರ್ಣ ಜಲಾವೃತಗೊಂಡು ಸಂಚಾರಕ್ಕೆ ಸಮಸ್ಯೆಯಾಗಿತ್ತು.
ಬಿರುಗಾಳಿ ಸಹಿತ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಸಂಪೂರ್ಣ ಜಲಾವೃತವಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ರಸ್ತೆ ಕೆಳ ಸೇತುವೆಗಳಲ್ಲಿ ಹೆಚ್ಚು ನೀರು ನಿಂತು ವಾಹನಗಳ ಓಡಾಟಕ್ಕೆ ಸಮಸ್ಯೆ ಉಂಟಾಗಿತ್ತು. ಕಳೆದ ವರ್ಷ ಕೂಡ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವೀಸ್ ರಸ್ತೆಗಳಲ್ಲಿ ಶೇಖರಣೆಯಾಗಿ, ಸಂಚಾರಕ್ಕೆ ತೊಡಕಾಗಿತ್ತು.
/newsfirstlive-kannada/media/post_attachments/wp-content/uploads/2023/11/BNG_RAIN_1-1.jpg)
ಇದೀಗ, ಮತ್ತೆ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಹಲವರಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us