/newsfirstlive-kannada/media/post_attachments/wp-content/uploads/2024/12/MND_CAR_1.jpg)
ಮಂಡ್ಯ: ಬೆಲ್ಲದ ವ್ಯಾಪಾರಿಯೊಬ್ಬರ ಕಾರಿಗೆ ದುಷ್ಕರ್ಮಿಗಳು ಮೊಟ್ಟೆ ಎಸೆದು, ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮಂಡ್ಯದ ಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದ ವ್ಯಾಪಾರಿ. ಇವರು ಬೆಲ್ಲದ ವ್ಯಾಪಾರಿ ಆಗಿದ್ದು ಮದ್ದೂರಿನಲ್ಲಿ ವ್ಯಾಪಾರ ಮುಗಿಸಿಕೊಂಡು ರಾತ್ರಿ ವೇಳೆ ಸರ್ವೀಸ್ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಮೊದಲು ಕಾರಿಗೆ ಮೊಟ್ಟೆಗಳನ್ನು ಎಸೆದಿದ್ದಾರೆ. ಇದರಿಂದ ಗಾಬರಿಯಾದ ವ್ಯಾಪಾರಿ ಕಾರನ್ನು ನಿಲ್ಲಿಸಿದ್ದಾರೆ.
ಇದನ್ನೂ ಓದಿ:ಶಿವಣ್ಣಗೆ ಇಂದು ಅಮೆರಿಕದಲ್ಲಿ ಸರ್ಜರಿ.. ಅಭಿಮಾನಿಗಳಿಂದ ವಿಶೇಷ ಪೂಜೆ
ಕಾರು ನಿಲ್ಲುತ್ತಿದ್ದಂತೆ ಓಡೋಡಿ ಬಂದ ಮೂವರು ಖದೀಮರು ವ್ಯಾಪಾರಿ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಕಾರಿನಲ್ಲಿದ್ದ 55 ಸಾವಿರ ರೂಪಾಯಿಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸದ್ಯ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ